ಸಮಗ್ರ ನ್ಯೂಸ್: ಆಮ್ ಆದ್ಮಿ ಪಾರ್ಟಿ ರಾಷ್ಟ್ರೀಯ ಸಮಿತಿ ಸಭೆಯಲ್ಲಿ ಕರ್ನಾಟಕದಿಂದ ಒಟ್ಟು 8 ರಾಷ್ಟ್ರೀಯ ಸಮಿತಿ ಸದಸ್ಯರಲ್ಲಿ ಓರ್ವರಾಗಿರುವ ದಕ್ಷಿಣ ಕನ್ನಡ ಜಿಲ್ಲೆಯ ಮಾಜಿ ಅಧ್ಯಕ್ಷರಾಗಿದ್ದ ಅಶೋಕ ಎಡಮಲೆ ಅವರು ಇದೇ ಡಿ. 31ರಂದು ದೆಹಲಿಯಿಂದ ನಡೆಯುವ 12ನೇ ರಾಷ್ಟ್ರೀಯ ಸಮಿತಿ ಸಭೆಯಲ್ಲಿ ಭಾಗವಹಿಸಲಿದ್ದಾರೆ.

ಕಳೆದ 2021 ರಲ್ಲಿ ರಾಷ್ಟ್ರೀಯ ಸಮಿತಿ ಸದಸ್ಯರ ಆಯ್ಕೆಯ ಚುನಾವಣೆಯಲ್ಲಿ ದಕ್ಷಿಣ ಕನ್ನಡ ಜಿಲ್ಲೆಯಿಂದ ರಾಷ್ಟ್ರೀಯ ಸಮಿತಿ ಸದಸ್ಯರಾಗಿ 3ವರ್ಷದ ಅವಧಿಗೆ ಚುನಾಯಿತರಾಗಿದ್ದರು. ಕಳೆದ ಬಾರಿ 2022ರಲ್ಲಿ ದೆಹಲಿಯಲ್ಲಿ ನಡೆದ ಸಭೆಯಲ್ಲಿ ಭಾಗವಹಿಸಿದ್ದರು.

ಅವರು ಸುಳ್ಯ ವಿಧಾನಸಭಾ ಅಧ್ಯಕ್ಷ, ರಾಜ್ಯ ವಿದ್ಯಾರ್ಥಿ ಹಾಗೂ ಯುವ ಘಟಕದ ರಾಜ್ಯ ಕಾರ್ಯಕಾರಿ ಸಮಿತಿ ಹಾಗೂ ಉಡುಪಿ ಮತ್ತು ದಕ್ಷಿಣ ಕನ್ನಡ ಜಿಲ್ಲೆಯ ವೀಕ್ಷಕರಾಗಿಯೂ, ಕಾರ್ಯ ನಿರ್ವಹಿಸಿದ್ದರು. ರಾಜ್ಯದಿಂದ ಮಾದ್ಯಮ ಚರ್ಚೆಯಲ್ಲಿಯೂ ಪಕ್ಷವನ್ನು ಪ್ರತಿನಿಧಿಸುತ್ತಿದ್ದಾರೆ.
ಆಮ್ ಆದ್ಮಿ ಪಕ್ಷವು ಕಳೆದ 2023ರ ಕರ್ನಾಟಕ ವಿಧಾನಸಭಾ ಚುನಾವಣೆಯಲ್ಲಿ ರಾಜ್ಯದಲ್ಲಿ 208 ವಿಧಾನಸಭಾ ಕ್ಷೇತ್ರದಿಂದ ಸ್ಪರ್ಧಿಸಿದ್ದು, ದಕ್ಷಿಣ ಕನ್ನಡ ಜಿಲ್ಲೆಯಲ್ಲಿಯೂ ಇವರು ಜಿಲ್ಲಾಧ್ಯಕ್ಷರಾಗಿದ್ದ ಸಂದರ್ಭದಲ್ಲಿ ಜಿಲ್ಲೆಯ 8 ವಿಧಾನಸಭಾ ಕ್ಷೇತ್ರದಲ್ಲಿ ಅಭ್ಯರ್ಥಿ ಕಣಕ್ಕಿಳಿಸಿ ಸ್ಪರ್ಧಿಸಿತ್ತು.