ಐಸಿಸಿ ನೂತನ ರ‍್ಯಾಂಕಿಂಗ್/ ಭಾರತಕ್ಕೆ ಅಗ್ರಸ್ಥಾನ

ಸಮಗ್ರ ನ್ಯೂಸ್: ಅಂತರಾಷ್ಟ್ರೀಯ ಕ್ರಿಕೆಟ್ ಸಮಿತಿ ಏಕದಿನ ವಿಶ್ವಕಪ್ ಬಳಿಕ ನೂತನ ರ‍್ಯಾಂಕಿಂಗ್​ ಪಟ್ಟಿಯನ್ನು ಪ್ರಕಟಿಸಿದ್ದು, ನೂತನ ಪಟ್ಟಿಯಲ್ಲಿ ಭಾರತ ತಂಡದ ಐವರು ಆಟಗಾರರು ಅಗ್ರಸ್ಥಾನ ಅಲಂಕರಿಸಿದ್ದಾರೆ.

. Ad Widget . Ad Widget

ಏಕದಿನ ಬ್ಯಾಟ್ಸ್‌ಮನ್‌ ಪಟ್ಟಿಯಲ್ಲಿ ಶುಭಮನ್ ಗಿಲ್, ಟಿ-20 ಬ್ಯಾಟ್ಸ್‌ಮನ್‌ಗಳ ಪೈಕಿ ಸೂರ್ಯಕುಮಾರ್ ಯಾದವ್, ಆಲ್‍ರೌಂಡರ್ ಗಳ ಪೈಕಿ ರವೀಂದ್ರ ಜಡೇಜಾ, ಟೆಸ್ಟ್ ಬೌಲರ್‌ಗಳ ಪಟ್ಟಿಯಲ್ಲಿ ರವಿಚಂದ್ರನ್ ಅಶ್ವಿನ್, ಟಿ20 ಬೌಲರ್‌ಗಳ ಪಟ್ಟಿಯಲ್ಲಿ ಇದೇ ಮೊದಲ ಬಾರಿಗೆ ರವಿ ಬಿಷ್ಣೋಯ್ ಅಗ್ರಸ್ಥಾನ ಅಲಂಕರಿಸುವಲ್ಲಿ ಯಶಸ್ವಿಯಾಗಿದ್ದಾರೆ.

. Ad Widget . . Ad Widget . Ad Widget

ಆಸ್ಟ್ರೇಲಿಯಾ ವಿರುದ್ಧದ ಸರಣಿಯಲ್ಲಿ 223 ರನ್‍ಗಳನ್ನು ಬಾರಿಸಿ ಅಬ್ಬರಿಸಿದ್ದ ರುತುರಾಜ್ ಗಾಯಕ್ವಾಡ್ ಟಿ20 ಕ್ರಿಕೆಟ್ ರ‍್ಯಾಂಕಿಂಗ್​ನಲ್ಲಿ 7ನೇ ಸ್ಥಾನದಲ್ಲಿ ಕಾಣಿಸಿಕೊಂಡಿದ್ದಾರೆ. ಹಾಗೆಯೇ ಟಿ20 ಆಲ್‍ರೌಂಡರ್ ಗಳ ಪಟ್ಟಿಯಲ್ಲಿ ಹಾರ್ದಿಕ್ ಪಾಂಡ್ಯ ಮೂರನೇ ಸ್ಥಾನದಲ್ಲಿದ್ದಾರೆ. ಆಸ್ಟ್ರೇಲಿಯಾ ವಿರುದ್ಧದ ಟಿ20 ಸರಣಿಯಲ್ಲಿ ಅದ್ಭುತ ಬೌಲಿಂಗ್ ಪ್ರದರ್ಶನ ನೀಡಿದ್ದ ಯುವ ಸ್ಪಿನ್ನರ್ ರವಿ ಬಿಷ್ಣೋಯ್, ಅಫ್ಘಾನಿಸ್ತಾನದ ರಶೀದ್ ಖಾನ್ ಅವರನ್ನು ಹಿಂದಿಕ್ಕಿ ಮೊದಲ ಸ್ಥಾನಕ್ಕೇರಿದ್ದಾರೆ. ಇದಲ್ಲದೆ ರೋಹಿತ್ ಶರ್ಮಾ, ಅಕ್ಷರ್ ಪಟೇಲ್ ಟಾಪ್ 10ನಲ್ಲಿ ಸ್ಥಾನ ಪಡೆದಿರುವ ಇತರೆ ಆಟಗಾರರು.

Leave a Comment

Your email address will not be published. Required fields are marked *