Ad Widget .

ಸಂಘ ಕಾರ್ಯಾಲಯಕ್ಕೆ ಪ್ರವೇಶ ನಿರಾಕರಣೆ/ ಗೂಳಿಹಟ್ಟಿ ಶೇಖರ್ ಹೇಳಿಕೆಗೆ ಆರ್‍ಎಸ್‍ಎಸ್ ಸ್ಪಷ್ಟನೆ

ಸಮಗ್ರ ನ್ಯೂಸ್: ನಾಗಪುರದ ಸ್ವಯಂ ಸೇವಕ ಸಂಘದ ಹೆಡಗೇವಾರ್ ವಸ್ತುಸಂಗ್ರಹಾಲಯಕ್ಕೆ ಪರಿಶಿಷ್ಟ ಜಾತಿಗೆ ಸೇರಿದ ವ್ಯಕ್ತಿ ಎಂಬ ಕಾರಣಕ್ಕೆ ಪ್ರವೇಶ ನಿರಾಕರಿಸಲಾಗಿದೆ ಎಂದು ಮಾಜಿ ಶಾಸಕ ಗೂಳಿಹಟ್ಟಿ ಶೇಖರ್ ನೀಡಿದ ಹೇಳಿಕೆಗಳ ಕುರಿತಾಗಿ ಆರ್‍ಎಸ್‍ಎಸ್ ಸ್ಪಷ್ಟನೆ ನೀಡಿದ್ದು, ನಾಗಪುರದಲ್ಲಿ ಸಂಘ ಕಾರ್ಯಾಲಯವನ್ನು ನೋಡಲು ಬಂದವರ ಹೆಸರನ್ನು ನೋಂದಾಯಿಸಿ ಪ್ರವೇಶ ನೀಡುವ ವ್ಯವಸ್ಥೆಯಿಲ್ಲ. ಇದೊಂದು ನಿರಾಧಾರದ ಹಾಗೂ ಹುರುಳಿಲ್ಲ ಆರೋಪ ಎಂದು ಹೇಳಿದೆ.

Ad Widget . Ad Widget .

ಈ ಹೇಳಿಕೆಯ ಹಿನ್ನಲೆಯಲ್ಲಿ ಆರ್‍ಎಸ್‍ಎಸ್ ಕಚೇರಿಯಿಂದ ಪತ್ರಿಕಾ ಪ್ರಕಟಣೆ ಹೊರಡಿಸಲಾಗಿದ್ದು, ಆರ್‍ಎಸ್‍ಎಸ್‍ನ ಎಲ್ಲಾ ಕಛೇರಿಗಳಲ್ಲಿ ಮತ್ತು ಈ ರೀತಿಯ ಸ್ಮಾರಕ ಕಟ್ಟಡಗಳಲ್ಲಿ ಎಲ್ಲರಿಗೂ ಮುಕ್ತ ಪ್ರವೇಶವಿದ್ದು, ಎಲ್ಲಾ ಜಾತಿ, ವರ್ಗದ ಸಾವಿರಾರು ಜನ ನಿತ್ಯ ಬಂದು ಹೋಗುತ್ತಲೇ ಇದ್ದಾರೆ. ಯಾರಿಗೂ ಪ್ರವೇಶ ನಿರಾಕರಣೆಯ ಪ್ರಶ್ನೆಯೇ ಬಂದಿಲ್ಲ ಎಂದು ತಿಳಿಸಿದೆ.

Ad Widget . Ad Widget .

ರಾಜ್ಯ ವಿಧಾನಸಭಾ ಚುನಾವಣೆಗೆ ನಾಲ್ಕು ತಿಂಗಳ ಮೊದಲೇ ಈ ಘಟನೆ ನಡೆದಿತ್ತು ಎನ್ನುವ ಗೂಳಿಹಟ್ಟಿ ಶೇಖರ್ ಅವರು ಅನಂತರ ಅನೇಕ ಸಂಘದ ಪ್ರಮುಖರನ್ನು ಭೇಟಿಯಾದರೂ ಎಲ್ಲಿಯೂ ತಮಗಾದ ಈ ‘ ಅವಮಾನ’ ದ ಬಗ್ಗೆ ಹೇಳಿರಲಿಲ್ಲ. ಹತ್ತು ತಿಂಗಳ ಬಳಿಕ ಹೇಳಿಕೆ ನೀಡಿರುವುದು ಆಶ್ಚರ್ಯ ತಂದಿದೆ. ರಾಷ್ಟ್ರೀಯ ಸ್ವಯಂ ಸೇವಕ ಸಂಘವು ಎಲ್ಲರನ್ನೂ ಸದಾ ತೆರೆದ ಮನಸ್ಸಿನಿಂದ ಸ್ವಾಗತಿಸುತ್ತದೆ ಎಂದು ಪ್ರಕಟಣೆಯಲ್ಲಿ ಉಲ್ಲೇಖಿಸಿದೆ.

Leave a Comment

Your email address will not be published. Required fields are marked *