Ad Widget .

ಹುತಾತ್ಮ ಪ್ರಾಂಜಲ್ ಕುಟುಂಬಕ್ಕೆ ಪರಿಹಾರ ನೀಡೋದಕ್ಕೆ ಸಿಎಂ- ತೇಜಸ್ವಿ ಸೂರ್ಯ ಜಟಾಪಟಿ

ಸಮಗ್ರ ನ್ಯೂಸ್: ಜಮ್ಮು-ಕಾಶ್ಮೀರದ ರಜೌರಿಯಲ್ಲಿ ಉಗ್ರರ ಜೊತೆಗಿನ ಹೋರಾಟದಲ್ಲಿ ಹುತಾತ್ಮರಾಗಿದ್ದ ಯೋಧ ಕ್ಯಾಪ್ಟನ್ ಪ್ರಾಂಜಲ್ ವಿಚಾರಕ್ಕೆ ಸಿಎಂ ಸಿದ್ದರಾಮಯ್ಯ ಮತ್ತು ಸಂಸದ ತೇಜಸ್ವಿ ಸೂರ್ಯ ಟ್ವೀಟ್ ವಾರ್ ನಡೆಸಿದ್ದಾರೆ.
ಪ್ರಾಂಜಲ್ ಕುಟುಂಬಸ್ಥರಿಗೆ ರಾಜ್ಯ ಸರ್ಕಾರ 50 ಲಕ್ಷ ರೂಪಾಯಿ ಪರಿಹಾರ ಧನದ ಚೆಕ್ ನೀಡಿದೆ. ಇನ್ನು ಸಂಸದ ತೇಜಸ್ವಿ ಸೂರ್ಯ ಟ್ವೀಟ್ ಮಾಡಿದ್ದರು. ಯೋಧರೊಬ್ಬರು ತೀರಿಕೊಂಡು 12 ದಿವಸಗಳಾದರೂ ನಿಮ್ಮ ಸರ್ಕಾರದ ಯಾರೊಬ್ಬ ಅಧಿಕಾರಿಯೂ ಸಂಪರ್ಕಿಸದೇ ಇದ್ದಿದ್ದು ಸತ್ಯ ಅಂತ ತೇಜಸ್ವಿ ಸೂರ್ಯ ಸರ್ಕಾರದ ವಿರುದ್ಧ ಕಿಡಿ ಕಾರಿದ್ದರು. ಇದಕ್ಕೆ ಟ್ವೀಟ್ ಮೂಲಕವೇ ಸಿಎಂ ತಿರುಗೇಟು ನೀಡಿದ್ದಾರೆ. ತೇಜಸ್ವಿ ಸೂರ್ಯ ಎಂಬ ಬಿಜೆಪಿ ಸಂಸದ, ತಪ್ಪು ಅರ್ಥ ಬರುವಂತೆ ನನ್ನ ಹೇಳಿಕೆಯನ್ನು ತುಂಡರಿಸಿ ಸಾಮಾಜಿಕ ಮಾಧ್ಯಮಗಳಲ್ಲಿ ಹರಿಬಿಟ್ಟು ವಿಕೃತಿ ಮೆರೆದಿರುವುದು ನನ್ನ ಗಮನಕ್ಕೆ ಬಂತು ಅಂತ ಸಿಎಂ ಟ್ವೀಟ್ ಮಾಡಿದ್ದಾರೆ

Ad Widget . Ad Widget .

ಭಾನುವಾರ ಪತ್ರಕರ್ತರು ಹುತಾತ್ಮ ಯೋಧ ಕ್ಯಾ. ಪ್ರಾಂಜಲ್ ಕುಟುಂಬಕ್ಕೆ ಸರ್ಕಾರದ ವತಿಯಿಂದ ಘೋಷಣೆ ಮಾಡಿರುವ ಪರಿಹಾರದ ಕುರಿತಾಗಿ ಪ್ರಶ್ನೆ ಕೇಳಿದಾಗ ‘ಪ್ರಾಂಜಲ್ ಯಾರು? ಎಂಬ ಉಡಾಫೆಯ ಮಾತುಗಳನ್ನಾಡಿದ್ದ ಮಾನ್ಯ ಮುಖ್ಯಮಂತ್ರಿ ಸಿದ್ದರಾಮಯ್ಯನವರು, ಇಂದು ಆ ಕುಟುಂಬಕ್ಕೆ 50 ಲಕ್ಷ ರೂ,ಗಳ ಪರಿಹಾರವನ್ನು ಇಷ್ಟೆಲ್ಲ ಅವಾಂತರಗಳ ನಂತರ ತಡವಾಗಿಯಾದರೂ ಘೋಷಿಸಿರುವುದನ್ನು ನಾನು ಸ್ವಾಗತಿಸುತ್ತೇನೆ ಅಂತ ತೇಜಸ್ವಿ ಸೂರ್ಯ ಟ್ವೀಟ್ ಮಾಡಿದ್ದರು

Ad Widget . Ad Widget .

ರಾಜಕೀಯ ದುರುದ್ದೇಶದಿಂದ ಈ ವಿಡಿಯೋವನ್ನು ತಿರುಚಿ ಹಂಚಿಕೊಂಡಿರುವ ತೇಜಸ್ವಿ ಸೂರ್ಯ ಅವರು ಹುತಾತ್ಮ ಪ್ರಾಂಜಲ್ ಮತ್ತು ಅವರ ಕುಟುಂಬ ವರ್ಗಕ್ಕೆ ಮಾತ್ರವಲ್ಲ ಸಮಸ್ತ ಯೋಧ ಸಮುದಾಯಕ್ಕೆ ಅವಮಾನ ಮಾಡಿದ್ದಾರೆ. ಕಿಂಚಿತ್ತು ಮಾನ – ಮರ್ಯಾದೆ ಏನಾದರೂ ಉಳಿದುಕೊಂಡಿದ್ದರೆ ತಾನು ಮಾಡಿರುವ ತಪ್ಪನ್ನು ಒಪ್ಪಿಕೊಂಡು ಸಾರ್ವಜನಿಕವಾಗಿ ಕ್ಷಮೆ ಕೇಳಬೇಕೆಂದು ಆಗ್ರಹಿಸುತ್ತೇನೆ ಅಂತ ಸಿದ್ದರಾಮಯ್ಯ ಟ್ವೀಟ್ ಮಾಡಿದ್ದಾರೆ

ಇನ್ನು ಸಿಎಂ ಟ್ವೀಟ್‌ಗೆ ತೇಜಸ್ವಿ ಸೂರ್ಯ ಉತ್ತರಿಸಿದ್ದಾರೆ. ಯೋಧರೊಬ್ಬರು ತೀರಿಕೊಂಡು 12 ದಿವಸಗಳಾದರೂ ನಿಮ್ಮ ಸರ್ಕಾರದ ಯಾವೊಬ್ಬ ಅಧಿಕಾರಿಯೂ ಸಂಪರ್ಕಿಸದೇ ಇದ್ದಿದ್ದು ಸತ್ಯ. ನಾನು ನಿಮಗೆ ಪತ್ರ ಬರೆದು ಜ್ಞಾಪಿಸುವ ವರೆಗೂ ಪರಿಹಾರ ನೀಡಲು ತಾವುಗಳು ಮೀನ ಮೇಷ ಎಣಿಸಿದ್ದು ಕೂಡ ಸತ್ಯ. ಮಾಧ್ಯಮದ ಸ್ನೇಹಿತರು ತಮ್ಮನ್ನು ಪ್ರಶ್ನಿಸಿದಾಗ, ಸರಿಯೋ ತಪ್ಪೋ ನೀವು ಪರಿಹಾರವನ್ನೇ ಘೋಷಿಸಿಲ್ಲ ಎಂದು ಹೇಳಿರುವುದು ಸಹ ಸತ್ಯ ಅಂತ ಟ್ವೀಟ್ ಮಾಡಿದ್ದಾರೆ.

ನಾನು ಪತ್ರಿಕಾಗೋಷ್ಠಿ ನಡೆಸಿ ಆಗ್ರಹ ಪಡಿಸುವವರೆಗೂ ತಾವು ಪರಿಹಾರ ಘೋಷಣೆ ಮಾಡದೇ ಇದ್ದಿದ್ದು ಕೂಡ ಸತ್ಯ. ಎರಡನೇ ಬಾರಿ ನಾನು ಪತ್ರಿಕಾಗೋಷ್ಠಿ ನಡೆಸಿ ಮತ್ತೆ ಆಗ್ರಹ ಮಾಡಿದ ನಂತರ, ಮಾಧ್ಯಮ & ಸಾರ್ವಜನಿಕರ ನಿರಂತರ ಒತ್ತಡದ ನಂತರವೇ ನಿನ್ನೆ ತಡರಾತ್ರಿ ತಾವು ಪರಿಹಾರ ಘೋಷಿಸಿದ್ದು ಕೂಡ ಸತ್ಯ. ಇದು ರಾಜಕೀಯ ಮಾಡುವ ವಿಷಯವಂತೂ ಖಂಡಿತ ಅಲ್ಲ. ಒಟ್ಟಿನಲ್ಲಿ ಹುತಾತ್ಮ ಯೋಧ ಕ್ಯಾ. ಪ್ರಾಂಜಲ್ ರವರ ಕುಟುಂಬಕ್ಕೆ ನ್ಯಾಯ ಸಿಕ್ಕಿರುವುದು ಸಂತಸದ ವಿಷಯ. ಧನ್ಯವಾದಗಳು ಅಂತ ಟ್ವೀಟ್‌ನಲ್ಲಿ ತೇಜಸ್ವಿ ಸೂರ್ಯ ತಿಳಿಸಿದ್ದಾರೆ.

Leave a Comment

Your email address will not be published. Required fields are marked *