Ad Widget .

ಅರ್ಜುನನ ಸಮಾಧಿಗೆ ಭೇಟಿ ನೀಡಿ ಪೂಜೆ ಸಲ್ಲಿಸಿದ ಯದುವೀರ್ ದಂಪತಿ

ಸಮಗ್ರ ನ್ಯೂಸ್: ದಸರಾದಲ್ಲಿ 8 ಬಾರಿ ಯಶಸ್ವಿಯಾಗಿ ಅಂಬಾರಿ ಹೊತ್ತಿದ್ದ ಸಾಕಾನೆ ಅರ್ಜುನ ಮಣ್ಣಲ್ಲಿ‌ ಮಣ್ಣಾಗಿದ್ದಾನೆ. ಹಾಸನ ಜಿಲ್ಲೆಯ ಸಕಲೇಶಪುರ ತಾಲ್ಲೂಕಿನ ದಬ್ಬಳ್ಳಿಕಟ್ಟೆ ನೆಡುತೋಪಿನಲ್ಲಿರು ಅರ್ಜುನನ ಸಮಾಧಿಗೆ ಯದುವೀರ್ ಕೃಷ್ಣದತ್ತ ಚಾಮರಾಜ ಒಡೆಯರ್​ ದಂಪತಿ ಭೇಟಿ ನೀಡಿ ಪೂಜೆ ಸಲ್ಲಿಸಿದ್ದಾರೆ.

Ad Widget . Ad Widget .

ಹಾಸನ ಜಿಲ್ಲೆಯ ಸಕಲೇಶಪುರ ತಾಲ್ಲೂಕಿನ ದಬ್ಬಳ್ಳಿಕಟ್ಟೆ ನೆಡುತೋಪಿನಲ್ಲಿರು ಅರ್ಜುನ ಸಮಾಧಿಗೆ ಭೇಟಿ ನೀಡಿದ್ದ ಯದುವೀರ್ ಕೃಷ್ಣದತ್ತ ಚಾಮರಾಜ ಒಡೆಯರ್​ ದಂಪತಿ ಪೂಜೆ ಸಲ್ಲಿಸಿದ್ದಾರೆ. ಅರ್ಜುನನ ಅಂತ್ಯಕ್ರಿಯೆಯಲ್ಲಿ ಭಾಗಿಯಾಗದ ಹಿನ್ನೆಲೆ ಇಂದು ದಂಪತಿ ಸಮೇತರಾಗಿ ಆಗಮಿಸಿ ಪೂಜೆ ಸಲ್ಲಿಸಿ ಅಂತಿಮ ನಮನ ಸಲ್ಲಿಸಿದ್ದಾರೆ.
ಡಿಸೆಂಬರ್ 5 ರಂದು ಮೈಸೂರು ಅರಮನೆಯ ಪುರೋಹಿತರ ನೇತೃತ್ವದಲ್ಲಿ ಅಂತ್ಯಕ್ರಿಯೆ ನೆರವೇರಿದ್ದು, ಈ ವೇಳೆ ಯದುವೀರ್ ಅವರು ಅರಮನೆಯಿಂದ ಪೂಜಾ ಸಾಮಗ್ರಿ, ಹಾರ, ಶಾಲು ಕೊಟ್ಟು ಕಳಿಸಿದ್ದರು.

Ad Widget . Ad Widget .

ಇದೀಗ ಸಮಾಧಿಗೆ ಬಂದು ಪೂಜೆ ಸಲ್ಲಿಸಿದ್ದಾರೆ. ಜೊತೆಗೆ ಅರಣ್ಯ ಇಲಾಖೆ ಸಿಬ್ಬಂದಿಯರು ಸಾಥ್ ನೀಡಿದ್ದಾರೆ.

Leave a Comment

Your email address will not be published. Required fields are marked *