Ad Widget .

ವಸತಿ ಶಾಲೆಗಳಿಗೆ 6ನೇ ತರಗತಿ ಪ್ರವೇಶಾತಿ/ ಕರ್ನಾಟಕ ಪರೀಕ್ಷಾ ಪ್ರಾಧಿಕಾರದಿಂದ ಅರ್ಜಿ ಆಹ್ವಾನ

ಕರ್ನಾಟಕ ಪರೀಕ್ಷಾ ಪ್ರಾಧಿಕಾರವು (ಕೆಇಎ) ಕರ್ನಾಟಕ ವಸತಿ ಶಿಕ್ಷಣ ಸಂಸ್ಥೆಗಳ ಸಂಘದ ವ್ಯಾಪ್ತಿಯಲ್ಲಿ ಕಾರ್ಯನಿರ್ವಹಿಸುತ್ತಿರುವ ವಸತಿ ಶಾಲೆಗಳಿಗೆ 2024-25ರ ಶೈಕ್ಷಣಿಕ ಸಾಲಿಗೆ 6ನೇ ತರಗತಿ ಪ್ರವೇಶಾತಿಗೆ ಅರ್ಜಿ ಆಹ್ವಾನಿಸಿದೆ. ಮೊರಾರ್ಜಿ ದೇಸಾಯಿ, ಕಿತ್ತೂರು ರಾಣಿ ಚೆನ್ನಮ್ಮ, ಏಕಲವ್ಯ ಮಾದರಿ, ಅಟಲ್ ಬಿಹಾರಿ ವಾಜಪೇಯಿ, ಇಂದಿರಾ ಗಾಂಧಿ, ಡಾ. ಬಿ. ಆರ್. ಅಂಬೇಡ್ಕರ್, ಮಾಸ್ತಿ ವೆಂಕಟೇಶ್ ಅಯ್ಯಂಗಾರ್, ಸಂಗೊಳ್ಳಿ ರಾಯಣ್ಣ, ಕವಿರನ್ನ, ಗಾಂಧಿತತ್ವ ಮತ್ತು ನಾರಾಯಣ ಗುರು ವಸತಿ ಶಾಲೆಗಳಿಗೆ 6ನೇ ತರಗತಿ ಪ್ರವೇಶ ಬಯಸುವ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದು.

Ad Widget . Ad Widget .

ಅರ್ಜಿ ಸಲ್ಲಿಕೆ ಪ್ರಕ್ರಿಯೆಯು ಗುರುವಾರೆದಿಂದ ಆರಂಭವಾಗಿದ್ದು, ಡಿ.31 ಕೊನೆಯ ದಿನವಾಗಿದೆ. 2024ರ ಫೆ. 18ರಂದು ಪ್ರವೇಶ ಪರೀಕ್ಷೆ ನಡೆಯಲಿದೆ. ಪ್ರಸ್ತುತ 5ನೇ ತರಗತಿಯಲ್ಲಿ ವ್ಯಾಸಂಗ ಮಾಡುತ್ತಿರುವ ವಿದ್ಯಾರ್ಥಿಗಳು ಸಂಘದ ವ್ಯಾಪ್ತಿಯಲ್ಲಿರುವ ಶಾಲೆ ಅಥವಾ ಕಾಲೇಜಿನಲ್ಲಿ ಆನ್‍ಲೈನ್‍ನಲ್ಲಿ ಅರ್ಜಿ ಸಲ್ಲಿಸಬಹುದು. ಪರಿಶಿಷ್ಟ ಜಾತಿ/ ಪಂಗಡ, ಹಿಂದುಳಿದ ವರ್ಗದ ಪ್ರವರ್ಗ 1ರ ವಿದ್ಯಾರ್ಥಿಗಳಿಗೆ 2.50 ಲಕ್ಷ ರೂ. ಮತ್ತು ಹಿಂದುಳಿದ ವರ್ಗ 2ಎ, 2ಬಿ, 3ಎ ಮತ್ತು 3ಬಿಗೆ 1 ಲಕ್ಷ ರೂ.ಗಳ ಕುಟುಂಬದ ವಾರ್ಷಿಕ ಆದಾಯ ಮಿತಿ ಇರಬೇಕು.

Ad Widget . Ad Widget .

ಅರ್ಜಿ ಸಲ್ಲಿಸಲು ವಿದ್ಯಾರ್ಥಿಯ ಸ್ಯಾಟ್ಸ್ ಸಂಖ್ಯೆ, ಭಾವಚಿತ್ರ ಮತ್ತು ಮೀಸಲಾತಿಗೆ ಸಂಬಂಧಿಸಿದ ಎಲ್ಲ ಮೂಲ ದಾಖಲಾತಿಯನ್ನು ಸಲ್ಲಿಸಬೇಕು. ಹೆಚ್ಚಿನ ಮಾಹಿತಿಗಾಗಿ ಕೆಇಎಯ ಸಹಾಯವಾಣಿ 080 23460460 ಅಥವಾ ವೆಬ್‍ಸೈಟ್ http://kea.kar.nic.in
ಮತ್ತು ವಸತಿ ಶಿಕ್ಷಣ ಸಂಸ್ಥೆಗಳ ವೆಬ್‍ಸೈಟ್ https://kreis.karnataka.gov.in/
ಸಂಪರ್ಕಿಸಬಹುದು.

Leave a Comment

Your email address will not be published. Required fields are marked *