ಶಿರಸಿ: ಕೆಎಸ್ಆರ್ ಟಿಸಿ ಬಸ್ ಕಾರು ಮುಖಾಮುಖಿ ಡಿಕ್ಕಿ| ಐವರು ಬಲಿ

ಸಮಗ್ರ ನ್ಯೂಸ್ : ಕೆಎಸ್ಆರ್ ಟಿಸಿ ಬಸ್ ಮತ್ತು ಕಾರಿನ ನಡುವೆ ನಡೆದ ಭೀಕರ ರಸ್ತೆ ಅಪಘಾತದಲ್ಲಿ ಕಾರಿನಲ್ಲಿದ್ದ ಐವರು ಸಾವನಪ್ಪಿದ ಘಟನೆ ಉತ್ತರ ಕನ್ನಡ ಜಿಲ್ಲೆಯ ಶಿರಸಿ ತಾಲೂಕಿನ ಬಂಡಲದಲ್ಲಿ ಡಿ. 8ರಂದು ನಡೆದಿದೆ.

Ad Widget ... ..

ಕಾರಿನಲ್ಲಿದ್ದವರು ತಮಿಳುನಾಡು ಮೂಲದವರು ಎಂದು ಹೇಳಲಾಗಿದ್ದು, ಮೃತರ ಗುರುತು ಪತ್ತೆಯಾಗಿಲ್ಲ. ಕೆಎಸ್ಆರ್ ಟಿಸಿ ಬಸ್ ಶಿರಸಿಯಿಂದ ಕುಮಟಾ ಕಡೆಗೆ ಹೋಗುತ್ತಿದ್ದು, ಕುಮಟಾ ಕಡೆಯಿಂದ ಶಿರಸಿಗೆ ಬರುತ್ತಿದ್ದ ಮಾರುತಿ ಸ್ವಿಫ್ಟ್ ಕಾರಿನ ನಡುವೆ ಮುಖಾಮುಖಿ ಡಿಕ್ಕಿ ಸಂಭವಿಸಿದೆ. ಅಪಘಾತವಾದ ರಭಸಕ್ಕೆ ಕಾರು ಸಂಪೂರ್ಣ ನುಜ್ಜುಗುಜ್ಜಾಗಿದ್ದು, ಬಸ್ಸಿನ ಮುಂಭಾಗ ಸಂಪೂರ್ಣ ಜಖಂಗೊಂಡಿದೆ. ಅಪಘಾತದಲ್ಲಿ ಕಾರಿನಲ್ಲಿದ್ದ ಐವರು ಸಾವನ್ನಪ್ಪಿದ್ದಾರೆ.

Ad Widget

Leave a Comment

Your email address will not be published. Required fields are marked *