Ad Widget .

ಆದರ್ಶ ಪದವಿ ಪೂರ್ವ ಕಾಲೇಜು/ ರಾಜ್ಯ ಸಚಿವ ಸಂಪುಟದ ಒಪ್ಪಿಗೆ

ಸಮಗ್ರ ನ್ಯೂಸ್: ಕರ್ನಾಟಕದ ಆಯ್ದ 60 ತಾಲ್ಲೂಕುಗಳಲ್ಲಿನ ವಿಜ್ಞಾನ ಸಂಯೋಜನೆ ಹೊಂದಿರುವ 60 ಸರ್ಕಾರಿ ಪದವಿ ಪೂರ್ವ ಕಾಲೇಜುಗಳನ್ನು ‘ಆದರ್ಶ ಪದವಿ ಪೂರ್ವ ಕಾಲೇಜು’ಗಳನ್ನಾಗಿ ಅಭಿವೃದ್ಧಿಪಡಿಸಲು ಗುರುವಾರ ನಡೆದ ಸಚಿವ ಸಂಪುಟ ಸಭೆ ಒಪ್ಪಿಗೆ ನೀಡಿದೆ.
ಈ ಯೋಜನೆಯ ಅಡಿಯಲ್ಲಿ ಪ್ರತಿ ಕಾಲೇಜಿಗೆ ತಲಾ 83. 30 ಲಕ್ಷ ನೀಡಲಾಗುವುದು. ಒಟ್ಟು 50 ಕೋಟಿಯನ್ನು ನೀಡಲು ತೀರ್ಮಾನಿಸಲಾಗಿದೆ. ಈ ಕಾಲೇಜುಗಳಲ್ಲಿ ಅತ್ಯಾಧುನಿಕ ಪ್ರಯೋಗಾಲಯ, ಆಧುನಿಕ ತಂತ್ರಜ್ಞಾನ ಆಧಾರಿತ ಬೋಧನಾ ಪರಿಕರಗಳನ್ನು ಒದಗಿಸಿ, ವಿದ್ಯಾರ್ಥಿಗಳನ್ನು ಐಐಟಿ, ಐಐಎಸ್‍ಸಿ, ವೈದ್ಯಕೀಯ ಸಂಸ್ಥೆಗಳಿಗೆ ಪ್ರವೇಶ ಪಡೆಯುವಂತೆ ತರಬೇತುಗೊಳಿಸಲು ಈ ಕಾಲೇಜುಗಳನ್ನು ಅಣಿ ಮಾಡಲಾಗುತ್ತದೆ.

Ad Widget . Ad Widget .

Leave a Comment

Your email address will not be published. Required fields are marked *