Ad Widget .

ತಾಳಿ ಇನ್ನೇನೋ ಕಟ್ಟಬೇಕು ಅನ್ನುವಷ್ಟರಲ್ಲಿ ಹುಡ್ಗಿ ಕೊಟ್ಲು ನೋಡಿ ಶಾಕ್ …!

ಸಮಗ್ರ ನ್ಯೂಸ್: ಇತ್ತೀಚಿನ ದಿನಗಳಲ್ಲಿ ವಿವಾಹಗಳು ಅರ್ಧದಲ್ಲೆ ನಿಲ್ಲುವುದು ಸಾಮಾನ್ಯ. ಅದೇ ತರ ಇಲ್ಲೊಂದು ಘಟನೆ ಸಿನಿಮೀಯ ರೀತಿಯಲ್ಲಿ ನಡೆದಿದೆ. ಮಂಟಪದಲ್ಲಿ ಎಲ್ಲಾ ರೀತಿಯ ಸಿದ್ಧತೆ ಮಾಡಿಕೊಂಡು ಲಕ್ಷಾಂತರ ರೂಪಾಯಿ ಖರ್ಚು ಮಾಡಿದ್ದರೂ ಕೊನೆ ಗಳಿಗೆಯಲ್ಲಿ ಮದುವೆಯನ್ನು ನಿಲ್ಲಿಸಲಾಗುತ್ತದೆ.ಈ ಘಟನೆ ಚಿತ್ರದುರ್ಗದಲ್ಲಿ ನಡೆದಿದೆ. ಇನ್ನೇನು ವರ ಕೈಯಲ್ಲಿ ತಾಳಿ ಹಿಡಿದು ಕಟ್ಟಬೇಕು ಎನ್ನುವಷ್ಟರಲ್ಲೇ ವಧು ನಿರಾಕರಿಸಿದ್ದಾಳೆ.

Ad Widget . Ad Widget .

ಚಿತ್ರದುರ್ಗ ಜಿಲ್ಲೆ ಹೊಸದುರ್ಗ ತಾಲ್ಲೂಕಿನ ಚಿಕ್ಕಬ್ಯಾಲದಕೆರೆ ಗ್ರಾಮದಲ್ಲಿ ಈ ಘಟನೆ ನಡೆದಿದ್ದು, ವರ ಇನ್ನೇನು ತಾಳಿ ಕಟ್ಟಬೇಕು ಎನ್ನುವಷ್ಟರಲ್ಲೇ ವಧು ಕೈ ಅಡ್ಡ ಹಿಡಿದು ತಡೆದಿದ್ದಾಳೆ. ಇದೀಗ ಈ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ಫುಲ್ ವೈರಲ್ ಆಗುತ್ತಿದೆ.

Ad Widget . Ad Widget .

ಚಿತ್ರದುರ್ಗ ಜಿಲ್ಲೆ ಹೊಸದುರ್ಗ ತಾಲ್ಲೂಕಿನ ಚಿಕ್ಕಬ್ಯಾಲದಕೆರೆ ಗ್ರಾಮದಲ್ಲಿ ಮಂಜುನಾಥ್ ಮತ್ತು ಐಶ್ವರ್ಯ ನಡುವೆ ವಿವಾಹ ನಿಶ್ಚಿಯವಾಗಿತ್ತು. ಅದರಂತೆ ಗ್ರಾಮದ ಭೈರವೇಶ್ವರ ಕಲ್ಯಾಣ ಮಂಟಪದಲ್ಲಿ ಮದುವೆಗೆ ಎಲ್ಲಾ ಸಿದ್ಧತೆ ಮಾಡಲಾಗಿತ್ತು. ಇನ್ನೇನು ವರ ತಾಳಿ ಕಟ್ಟಿದರೆ ಮದುವೆಯೇ ಮುಗಿದು ಹೋಗಿತ್ತು. ಆದ್ರೆ, ವಧು ಐಶ್ವರ್ಯ, ಕೊನೆ ಕ್ಷಣದಲ್ಲಿ ಈ ಮದುವೆಯೇ ಬೇಡ ಎಂದು ತಾಳಿ ಕಟ್ಟಿಸಿಕೊಳ್ಳು ನಿರಾಕರಿಸಿದ್ದಾಳೆ.

https://www.facebook.com/share/v/fDpwPTdTGmuB1rms/?mibextid=9R9pXO

ಮಂಜುನಾಥ್ ತಾಳಿ ಕಟ್ಟಲು ಎದ್ದು ನಿಂತರೇ ಬೇಡ ಎಂದು ಕೈ ಅಡ್ಡ ಹಿಡಿದಿದ್ದಾಳೆ. ಈ ವೇಳೆ ಸಂಬಂಧಿಕರು ಐಶ್ವರ್ಯಳನ್ನು ಮನವೊಲಿಸಿದ್ದಾರೆ. ಎಷ್ಟೇ ಹರಸಾಹಸ ಪಟ್ಟರೂ ಸಹ ಬಗ್ಗದ ಐಶ್ವರ್ಯ ತಾಳಿ ಕಟ್ಟಿಸಿಕೊಳ್ಳಲು ಒಪ್ಪಲೇ ಇಲ್ಲ. ಯುವತಿ ನಡೆಗೆ ಯುವಕನ ಸಂಬಂಧಿಕರು ಆಕ್ರೋಶ ವ್ಯಕ್ತಪಡಿಸಿದ್ದಾರೆ. ಈ ವೇಳೆ ಯುವತಿ ಹಾಗೂ ಯುವಕನ ಕುಟುಂಬಸ್ಥರ ನಡುವೆ ವಾಗ್ವಾದ ಉಂಟಾಗಿ ಕೊನೆಗೆ ಅಂತಿಮವಾಗಿ ಈ ಮದುವೆಯೇ ರದ್ದುಗೊಂಡಿದೆ.

Leave a Comment

Your email address will not be published. Required fields are marked *