Ad Widget .

ಕಳಚಿದ ಸಿನಿಮಾ ರಂಗದ ಮತ್ತೊಂದು ಕೊಂಡಿ| ಹಿರಿಯ ನಟಿ ಲೀಲಾವತಿ ಇನ್ನಿಲ್ಲ

ಸಮಗ್ರ ನ್ಯೂಸ್: ಸ್ಯಾಂಡಲ್‌ವುಡ್‌ನ ಹಿರಿಯ ನಟಿ ಲೀಲಾವತಿ ಅವರು ವಿಧಿವಶರಾಗಿದ್ದಾರೆ. ಅವರಿಗೆ 85 ವರ್ಷ ವಯಸ್ಸಾಗಿತ್ತು. ವಯೋ ಸಹಜ ಖಾಯಿಲೆಯಿಂದ ಬಳಲುತ್ತಿದ್ದ ಅವರು ತಮ್ಮ ಸ್ವಗೃಹದಲ್ಲದೇ ಕೆಲವು ದಿನಗಳಿಂದ ಹಾಸಿಗೆ ಹಿಡಿದಿದ್ದರು. ಅವರನ್ನು ಇಂದು ಖಾಸಗಿ ಆಸ್ಪತ್ರೆಗೆ ಚಿಕಿತ್ಸೆಗಾಗಿ ದಾಖಲು ಮಾಡಲಾಗಿತ್ತು, ಆದರೆ ಅವರಿಗೆ ಚಿಕಿತ್ಸೆ ಫಲಕಾರಿಯಾಗದೇ ವಿಧಿವಶರಾಗಿದ್ದಾರೆ.

. Ad Widget . . Ad Widget . Ad Widget Ad Widget . Ad Widget . Ad Widget . Ad Widget . Ad Widget . Ad Widget . Ad Widget .

ಅವರ ಅಂತ್ಯಕ್ರಿಯೆಯನ್ನು ನೆಲಮಂಗಲದಲ್ಲಿರುವ ಅವರ ತೋಟದ ಮನೆಯಲ್ಲೇ ನೇರವೇರಲಿದೆ ಅಂತ ಪ್ರಾಥಮಿಕ ಮೂಲಗಳಿಂದ ತಿಳಿದು ಬಂದಿದೆ. ಇಂದು ರಾತ್ರಿ ಅವರ ಪಾರ್ಥೀವ ಶರೀರವವನ್ನು ಸಾರ್ವಜನಿಕ ದರ್ಶನಕ್ಕೆ ಇಡಲಾಗಿದ್ದು, ಬಳಿಕ ಅವರ ಅಂತ್ಯಕ್ರಿಯೆಯನ್ನು ನೇರವೇರಸಲಾಗುವುದು ಅಂತ ತಿಳಿದು ಬಂದಿದೆ.

Ad Widget . Ad Widget . Ad Widget .

ಲೀಲಾವತಿ ದಕ್ಷಿಣ ಭಾರತದ ನಟಿಯಾಗಿ ಗುರುತಿಸಿಕೊಂಡಿದ್ದರು. ಕನ್ನಡದಲ್ಲಿ ಪ್ರಧಾನವಾಗಿ ನಟಿಸುವುದರೊಂದಿಗೆ ತಮಿಳು, ತೆಲುಗು ಮತ್ತು ಮಲಯಾಳಂ ಭಾಷೆಗಳ ಸುಮಾರು 600 ಚಿತ್ರಗಳಲ್ಲಿ ನಟಿಸಿದ್ದಾರೆ. ಕರ್ನಾಟಕ ಸರ್ಕಾರ ಚಲನಚಿತ್ರರಂಗದ ಜೀವಮಾನ ಸಾಧನೆಗೆ ನೀಡುವ ಅತ್ತ್ಯುನ್ನತ ಪ್ರಶಸ್ತಿ ಡಾ. ರಾಜಕುಮಾರ್ ಪ್ರಶಸ್ತಿಯನ್ನು 1999-2000ನೇ ಸಾಲಿನಲ್ಲಿ ಪಡೆದ ಲೀಲಾವತಿ ಅವರು, ‘ತುಮಕೂರು ವಿಶ್ವವಿದ್ಯಾಲಯ’ದ ಗೌರವ ಡಾಕ್ಟರೇಟ್ ಪದವಿಯನ್ನು 2008ರಲ್ಲಿ ಪಡೆದಿದ್ದರು.

ಲೀಲಾ ಕಿರಣ್ ಹುಟ್ಟಿದ್ದು ದಕ್ಷಿಣ ಕನ್ನಡ ಜಿಲ್ಲೆಯ ಬೆಳ್ತಂಗಡಿಯಲ್ಲಿ. ನಾಟಕ, ರಂಗಭೂಮಿ ಬಗೆಗೆ ಚಿಕ್ಕವಯಸ್ಸಿನಲ್ಲೇ ಆಸಕ್ತಿ ಹೊಂದಿದ್ದ ಲೀಲಾ ಅವರು ವೃತ್ತಿಜೀವನ ಆರಂಭಿಸಿದ್ದು ಮೈಸೂರಿನಲ್ಲಿ. ವೃತ್ತಿರಂಗಭೂಮಿಯಲ್ಲಿ ಸಂಪೂರ್ಣ ತೊಡಗಿಸಿಕೊಳ್ಳುವ ಮುನ್ನ ಕೆಲವೆಡೆ ಮನೆ ಕೆಲಸವನ್ನೂ ಅವರು ನಿರ್ವಹಿಸಿದ್ದರು.

ಲೀಲಾವತಿ ಅವರ ಮಗ ವಿನೋದ್ ರಾಜ್ ಕನ್ನಡ ಚಿತ್ರರಂಗದ ಖ್ಯಾತ ನಟ. ಪ್ರಸ್ತುತ ತಾಯಿ-ಮಗ ಇಬ್ಬರೂ ತೋಟಗಾರಿಕೆ ಮತ್ತು ಕೃಷಿ ಚಟುವಟಿಕೆಗಳಲ್ಲಿ ಸಕ್ರಿಯರಾಗಿದ್ದರು. ಲೀಲಾವತಿ ಅವರು 1949ರಲ್ಲಿ ಶಂಕರ್ ಸಿಂಗ್ ಅವರ ನಾಗಕನ್ನಿಕ ಚಿತ್ರದಲ್ಲಿ ಸಖಿಯ ಪಾತ್ರದ ಮುಖಾಂತರ ಕನ್ನಡ ಚಿತ್ರರಂಗ ಪ್ರವೇಶಿಸಿದರು. ಸುಬ್ಬಯ್ಯ ನಾಯ್ಡು ಅವರ ಸಂಸ್ಥೆಯಲ್ಲಿ ರಂಗಭೂಮಿ ಕಲಾವಿದೆಯಾಗಿದ್ದ ಲೀಲಾವತಿ ಅವರು ಕಯಾದುವಿನ ಸಖಿಯಾಗಿ ಅಭಿನಯಿಸಿದ್ದರು. ಮಹಾಲಿಂಗ ಭಾಗವತರ ನಾಟಕ ಸಂಸ್ಥೆಯನ್ನು ಸೇರಿ ಹಲವಾರು ನಾಟಕಗಳಲ್ಲಿ ಅಭಿನಯಿಸಿದರು. ಸುಬ್ಬಯ್ಯ ನಾಯ್ಡು ಅವರ ‘ಭಕ್ತ ಪ್ರಹ್ಲಾದ’ದಲ್ಲಿ ಕೂಡಾ ಅಭಿನಯಿಸಿದರು. ಹಲವಾರು ಚಿತ್ರಗಳಲ್ಲಿ ಚಿಕ್ಕ ಪಾತ್ರಗಳಲ್ಲಿ ಅಭಿನಯಿಸಿದರು.

ನಾಯಕಿಯಾಗಿ ಅವರು ಅಭಿನಯಿಸಿದ ಮೊದಲ ಚಿತ್ರ ಮಾಂಗಲ್ಯ ಯೋಗ. ಡಾ. ರಾಜ್ ಕುಮಾರ್ ಅವರೊಂದಿಗೆ ನಟಿಸಿದ ಮೊದಲ ಚಿತ್ರ ರಣಧೀರ ಕಂಠೀರವ.
ಪ್ರಶಸ್ತಿ-ಪುರಸ್ಕಾರಗಳು
2008 – ತುಮಕೂರು ವಿಶ್ವವಿದ್ಯಾಲಯದಿಂದ ಗೌರವ ಡಾಕ್ಟರೇಟ್
2006 – ಅತ್ತ್ಯುತ್ತಮ ಪೋಷಕನಟಿ ಫಿಲಂಫೇರ್ ಕನ್ನಡ – ಕನ್ನಡದ ಕಂದ
1999-2000 – ಡಾ. ರಾಜಕುಮಾರ್ ಜೀವಮಾನ ಸಾಧನೆ ಪ್ರಶಸ್ತಿ
ಕರ್ನಾಟಕ ರಾಜ್ಯ ಚಲನಚಿತ್ರ ಪ್ರಶಸ್ತಿಗಳು:
ಅತ್ತ್ಯುತ್ತಮ ಪೋಷಕನಟಿ ಪ್ರಶಸ್ತಿ

1960-70 – ಗೆಜ್ಜೆಪೂಜೆ
1971-72 – ಸಿಪಾಯಿ ರಾಮು
1989-90 – ಡಾಕ್ಟರ್ ಕೃಷ್ಣ

Leave a Comment

Your email address will not be published. Required fields are marked *