ಸಮಗ್ರ ನ್ಯೂಸ್: ಕಾಂಗ್ರೆಸ್ ತೆಲಂಗಾಣದಲ್ಲಿ ಅಧಿಕಾರಕ್ಕೆ ಬಂದ ಮೂರೇ ದಿನಗಳಲ್ಲಿ ಗ್ಯಾರಂಟಿ ಯೋಜನೆಗಳ ಜಾರಿಗೆ ಮುಂದಾಗಿದ್ದು, ಇಂದಿನಿಂದ ಮಹಿಳೆಯರಿಗೆ ಸಾರಿಗೆ ಬಸ್ಗಳಲ್ಲಿ ಉಚಿತ ಪ್ರಯಾಣಕ್ಕೆ ಅವಕಾಶ ದೊರೆತಿದೆ.
ಇಂದು ಮಹಿಳೆಯರಿಗೆ ಉಚಿತ ಪ್ರಯಾಣದ ಮಹಾಲಕ್ಷ್ಮೀ ಯೋಜನೆ ಜಾರಿಗೆ ನೂತನ ಮುಖ್ಯಮಂತ್ರಿ ರೇವಂತ್ ರೆಡ್ಡಿ ನಿರ್ಧರಿಸಿದ್ದಾರೆ.
ಈ ಯೋಜನೆ ಅಡಿಯಲ್ಲಿ ಮಹಿಳೆಯರಿಗೆ ಉಚಿತ ಬಸ್ ಪ್ರಯಾಣಕ್ಕೆ ಅವಕಾಶ ಸಿಗಲಿದ್ದು, ತೆಲಂಗಾಣ ರಾಜ್ಯಾದ್ಯಂತ ಉಚಿತವಾಗಿ ಪ್ರಯಾಣಿಸಬಹುದಾಗಿದೆ.
ಕಾಂಗ್ರೆಸ್ ನಾಯಕಿ ಸೋನಿಯಾ ಗಾಂಧಿ ಅವರ ಜನ್ಮ ದಿನವಾದ ಇಂದು ಮಹಾಲಕ್ಷ್ಮೀ ಯೋಜನೆಗೆ ಚಾಲನೆ ಸಿಗಲಿದೆ. ಇದರ ಜೊತೆಗೆ ರಾಜೀವ್ ಆರೋಗ್ಯ ಶ್ರೀ ಫಲಾನುಭವಿಗಳಿಗೆ 10 ಲಕ್ಷ ವಿಮಾ ಯೋಜನೆ ಕೂಡ ಇಂದು ಜಾರಿಗೆ ಬರಲಿದೆ.