ಖಾಸಗಿ ಬಸ್ ಪಲ್ಟಿ ಇಬ್ಬರು ಸಾವು| 20ಕ್ಕೂ ಹೆಚ್ಚು ಜನರಿಗೆ ಗಾಯ

ಸಮಗ್ರ ನ್ಯೂಸ್: ಚಾಲಕನ ನಿಯಂತ್ರಣ ತಪ್ಪಿ ಖಾಸಗಿ ಬಸ್ ಪಲ್ಟಿಯಾಗಿ ಇಬ್ಬರು ಸಾವನ್ನಪ್ಪಿರುವ ಘಟನೆ ಚಿತ್ರದುರ್ಗ ಜಿಲ್ಲೆ ಹೊಸದುರ್ಗ ತಾಲೂಕಿನ ಉಗಣೆಕಟ್ಟೆ-ಆವಿಹಟ್ಟಿ ನಡುವೆ ನಡೆದಿದೆ. ಮದುವೆಗೆ ಎಂದು ಹೊಸದುರ್ಗದಿಂದ ದಾವಣಗೆರೆಗೆ ತೆರಳುತ್ತಿದ್ದ ಖಾಸಗಿ ಬಸ್ ನಿಯಂತ್ರಣ ತಪ್ಪಿ ರಸ್ತೆ ಬದಿಯ ವಿದ್ಯುತ್ ಕಂಬಕ್ಕೆ ಡಿಕ್ಕಿ ಹೊಡೆದು ಪಲ್ಟಿಯಾಗಿದೆ. ಈ ದುರ್ಘಟನೆಯಲ್ಲಿ ಬಸ್ ನಲ್ಲಿದ್ದ ಇಬ್ಬರು ಸ್ಥಳದಲ್ಲೇ ಸಾವನ್ನಪ್ಪಿದ್ದು, ಸುಮಾರು 20ಕ್ಕೂ ಹೆಚ್ಚು ಮಂದಿ ಗಾಯಗೊಂಡಿದ್ದಾರೆ. ಹಲವರ ಸ್ಥಿತಿ ಗಂಭೀರವಾಗಿದೆ.

Ad Widget ... ..

ವಿಧಿಯಾಟ ಎಂತ ವಿಪರ್ಯಾಸ ಅಲ್ವಾ..ಈ ಭೀಕರ ದುರಂತ ಹೊಸದುರ್ಗ ಠಾಣೆ ವ್ಯಾಪ್ತಿಯಲ್ಲಿ ಸಂಭವಿಸಿದ್ದು, ಬಸ್ ಕೆಳಗೆ ಸಿಲುಕಿದವರನ್ನ ರಕ್ಷಿಸಿದ ಪೊಲೀಸರು ಆಸ್ಪತ್ರೆಗೆ ರವಾನಿಸಿದ್ದಾರೆ. ಬಸ್​ ಡಿಕ್ಕಿಯಾದ ರಭಸಕ್ಕೆ ವಿದ್ಯುತ್ ಕಂಬಗಳು ಮುರಿದು ಬಿದ್ದಿದ್ದು, ವಿದ್ಯುತ್ ಸಂಪರ್ಕ ಕಡಿತದಿಂದ ಸಂಭನೀಯ ದುರಂತವೊಂದು ತಪ್ಪಿದೆ. ಗಾಯಾಳುಗಳನ್ನು ಹೊಳಲ್ಕೆರೆ ಹಾಗೂ ಚಿತ್ರದುರ್ಗ ಆಸ್ಪತ್ರೆಗೆ ದಾಖಲು ಮಾಡಲಾಗಿದೆ.

Ad Widget

Leave a Comment

Your email address will not be published. Required fields are marked *