Ad Widget .

ಜಮ್ಮು ಮತ್ತು ಕಾಶ್ಮೀರ ವಿಶೇಷ ಸ್ಥಾನಮಾನ ರದ್ದು/ ನಾಳೆ ಸುಪ್ರೀಂ ತೀರ್ಪು

ಸಮಗ್ರ ನ್ಯೂಸ್: ಜಮ್ಮು ಮತ್ತು ಕಾಶ್ಮೀರಕ್ಕೆ ವಿಶೇಷ ಸ್ಥಾನಮಾನವನ್ನು ಒದಗಿಸುವ ಸಂವಿಧಾನದ 370ನೇ ವಿಧಿಯನ್ನು ಹಿಂಪಡೆದಿರುವುದನ್ನು ಪ್ರಶ್ನಿಸಿ ಸಲ್ಲಿಕೆಯಾಗಿರುವ ಅರ್ಜಿಗಳ ವಿಚಾರಣೆ ನಡೆಸಿರುವ ಸುಪ್ರೀಂಕೋರ್ಟ್, ಸೋಮವಾರ(ಡಿ.11) ತನ್ನ ತೀರ್ಪನ್ನು ಪ್ರಕಟಿಸಲಿದೆ.

Ad Widget . Ad Widget .

ಕೇಂದ್ರ ಸರ್ಕಾರವು 2019ರ ಆಗಸ್ಟ್ 5ರಂದು ಸಂವಿಧಾನ 370ನೇ ವಿಧಿಯಡಿ ಜಮ್ಮು-ಕಾಶ್ಮೀರಕ್ಕೆ ನೀಡಿದ್ದ ವಿಶೇಷ ಸ್ಥಾನಮಾನವನ್ನು ಹಿಂಪಡೆದಿದ್ದು, ಇದನ್ನು ಪ್ರಶ್ನಿಸಿ ಸುಪ್ರೀಂ ಕೋರ್ಟ್‍ನಲ್ಲಿ ಅರ್ಜಿ ಸಲ್ಲಿಸಲಾಗಿತ್ತು. ಆಗಸ್ಟ್ 2ರಿಂದ ಅರ್ಜಿಗಳ ವಿಚಾರಣೆ ಪ್ರಾರಂಭಿಸಿದ್ದ ನ್ಯಾಯಾಲಯ, 16 ದಿನಗಳ ವಿಚಾರಣೆಯ ನಂತರ ಸೆಪ್ಟೆಂಬರ್ 5 ರಂದು ತನ್ನ ತೀರ್ಪನ್ನು ಕಾಯ್ದಿರಿಸಿತ್ತು. ಇದೀಗ ಮುಖ್ಯ ನ್ಯಾಯಮೂರ್ತಿ ಡಿ.ವೈ.ಚಂದ್ರಚೂಡ್, ನ್ಯಾಯಮೂರ್ತಿಗಳಾದ ಸಂಜಯ್ ಕಿಶನ್ ಕೌಲ್, ಸಂಜೀವ್ ಖನ್ನಾ, ಬಿ.ಆರ್.ಗವಾಯಿ ಹಾಗೂ ಸೂರ್ಯಕಾಂತ ಅವರಿದ್ದ ಪೀಠ ನಾಳೆ ತೀರ್ಪು ಪ್ರಕಟಿಸಲಿದೆ.

Ad Widget . Ad Widget .

ಕೇಂದ್ರದ ಪರವಾಗಿ ಅಟಾರ್ನಿ ಜನರಲ್ ಆರ್. ವೆಂಕಟರಮಣಿ, ಸಾಲಿಸಿಟರ್ ಜನರಲ್ ತುಷಾರ್ ಮೆಹ್ರಾ, ಹಿರಿಯ ವಕೀಲ ಹರೀಶ್ ಸಾಳ್ವೆ, ರಾಕೇಶ್ ದ್ವಿವೇದಿ, ವಿ.ಗಿರಿ ಅವರು ವಾದ ಮಂಡಿಸಿದ್ದರು. ಅರ್ಜಿದಾರರ ಪರವಾಗಿ ಕಪಿಲ್ ಸಿಬಲ್, ಗೋಪಾಲ್ ಸುಬ್ರಮಣ್ಯಂ, ರಾಜೀವ್ ಧವನ್, ಝಫರ್ ಶಾ ವಾದ ಮಂಡಿಸಿದ್ದಾರೆ.

Leave a Comment

Your email address will not be published. Required fields are marked *