ಛತ್ತೀಸಗಢದ ನೂತನ ಮುಖ್ಯಮಂತ್ರಿಯಾಗಿ ವಿಷ್ಣುದೇವ್ ಸಾಯ್

ಸಮಗ್ರ ನ್ಯೂಸ್: 90 ಸ್ಥಾನಗಳ ಛತ್ತೀಸಗಢ ವಿಧಾನಸಭೆ ಚುನಾವಣೆಯಲ್ಲಿ ಬಿಜೆಪಿ 54ರಲ್ಲಿ ಗೆಲುವು ಸಾಧಿಸುವ ಮೂಲಕ ಅಧಿಕಾರದ ಗದ್ದುಗೆ ಏರಿದ್ದು, ಶಾಸಕರ ಸಭೆಯಲ್ಲಿ ನೂತನ ಮುಖ್ಯಮಂತ್ರಿಯಾಗಿ ವಿಷ್ಣುದೇವ್ ಸಾಯ್ ಅವರನ್ನು ಆಯ್ಕೆ ಮಾಡಲಾಗಿದೆ.

Ad Widget ... ..

ವಿಷ್ಣುದೇವ್ ಸಾಯ್ ಅವರು 2020ರಿಂದ 2022ರ ವರೆಗೆ ಛತ್ತೀಸಗಢದ ಬಿಜೆಪಿ ರಾಜ್ಯ ಘಟಕದ ಅಧ್ಯಕ್ಷರಾಗಿದ್ದರು. ಪ್ರಧಾನಿ ಮೋದಿ ಅವರ ಸಂಪುಟದಲ್ಲಿ ಸಚಿವರಾಗಿಯೂ ವಿವಿಧ ಹುದ್ದೆಗಳನ್ನು ಅಲಂಕರಿಸಿದ್ದಾರೆ.

Ad Widget

ಡಿಸೆಂಬರ್ 3ರ ಫಲಿತಾಂಶಕ್ಕೂ ಮುನ್ನ ಬಹುತೇಕ ಸಮೀಕ್ಷೆಗಳು ಛತ್ತೀಸಗಢದಲ್ಲಿ ಕಾಂಗ್ರೆಸ್ ಗೆಲುವು ಸಾಧಿಸಲಿದೆ ಎಂದು ಹೇಳಿದ್ದವು. ಆದರೆ ಸಮೀಕ್ಷೆಗಳೆಲ್ಲಾ ಸುಳ್ಳಾಗಿ ಕಾಂಗ್ರೆಸ್ 35 ಸ್ಥಾನಗಳನ್ನಷ್ಟೇ ತನ್ನದಾಗಿಸಿಕೊಂಡಿತ್ತು. ಉಳಿದಂತೆ ಒಂದು ಕ್ಷೇತ್ರದಲ್ಲಿ ಪಕ್ಷೇತರ ಅಭ್ಯರ್ಥಿಯೊಬ್ಬರು ಗೆಲುವು ಕಂಡಿದ್ದರು.

Leave a Comment

Your email address will not be published. Required fields are marked *