Ad Widget .

ಕಾರು – ಮಿನಿ ಬಸ್ ನಡುವೆ ಢಿಕ್ಕಿ | ಪ್ರೇಮಿಗಳು ಸಾವು

ಸಮಗ್ರ ನ್ಯೂಸ್: ಮಿನಿ ಬಸ್‌ಗೆ ಕಾರು ಡಿಕ್ಕಿಯಾಗಿ ಪ್ರೇಮಿಗಳು ಸಾವನ್ನಪ್ಪಿರುವ ಘಟನೆ ರಾಮನಗರದ ಕನಕಪುರ ತಾಲೂಕಿನ ಕೆಬ್ಬಹಳ್ಳಿ ಗ್ರಾಮದ ಬಳಿ ನಡೆದಿದೆ. ಮೃತರನ್ನು ಕೆಬ್ಬಹಳ್ಳಿ ಗ್ರಾಮದ ದೀಪಕ್ (25) ಮತ್ತು ಶೈಲಾ (22) ಎಂದು ಗುರುತಿಸಲಾಗಿದೆ.

Ad Widget . Ad Widget .

ಕನಕಪುರದಿಂದ ದೀಪಕ್ ಸ್ವಗ್ರಾಮ ಕೆಬ್ಬಹಳ್ಳಿಗೆ ಅತಿವೇಗವಾಗಿ ಕಾರು ಚಲಾಯಿಸುತ್ತಿದ್ದ. ದೀಪಕ್ ಮುಂದಿದ್ದ ವಾಹನವನ್ನು ಓವರ್ ಟೇಕ್ ಮಾಡಲು ಹೋಗಿ ಮಿನಿ ಬಸ್‌ಗೆ ಡಿಕ್ಕಿ ಹೊಡೆದಿದ್ದಾನೆ. ಇದರಿಂದಾಗಿ ಕಾರು ಸಂಪೂರ್ಣ ಜಖಂಗೊಂಡಿದೆ.

Ad Widget . Ad Widget .

ಕಾರಿನಲ್ಲಿದ್ದ ಶೈಲಾ ಸ್ಥಳದಲ್ಲೇ ಸಾವನ್ನಪ್ಪಿದರೆ, ಗಂಭೀರವಾಗಿ ಗಾಯಗೊಂಡಿದ್ದ ದೀಪಕ್‌ನನ್ನು ಸ್ಥಳೀಯ ಆಸ್ಪತ್ರೆಗೆ ರವಾನಿಸಲಾಗಿತ್ತು. ಆದರೆ ಚಿಕಿತ್ಸೆ ಫಲಿಸದೇ ದೀಪಕ್ ಕೂಡಾ ಸಾವನ್ನಪ್ಪಿದ್ದಾನೆ. ಸ್ಥಳಕ್ಕೆ ಕೋಡಿಹಳ್ಳಿ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದು, ಪ್ರಕರಣ ದಾಖಲಿಸಿಕೊಂಡಿದ್ದಾರೆ.

Leave a Comment

Your email address will not be published. Required fields are marked *