ರಾಜಭವನದಲ್ಲಿ ಬಾಂಬ್| ಬಂತ್ತೊಂದು ಬೆದರಿಕೆ ಕರೆ

ಸಮಗ್ರ ನ್ಯೂಸ್: ರಾಜಭವನದಲ್ಲಿ ಬಾಂಬ್ ಇರೋದಾಗಿ ಸುಳ್ಳು ಕರೆಯೊಂದು ರಾತ್ರಿ 11.30ಕ್ಕೆ ಪೊಲೀಸ್ ಕಂಟ್ರೋಲ್ ರೂಂಗೆ ಬಂದಿದೆ. ತಕ್ಷಣವೇ ರಾತ್ರಿ 11:45 ಕ್ಕೆ ಬಾಂಬ್ ನಿಷ್ಕ್ರಿಯ ದಳದ ಸಿಬ್ಬಂದಿ ರಾಜಭವನಕ್ಕೆ ತೆರಳಿ ತಪಾಸಣೆ ನಡೆಸಿದ್ದಾರೆ. ಸುಮಾರು 30 ನಿಮಿಷಕ್ಕೂ ಅಧಿಕ ಸಮಯ ತಪಾಸಣೆ ನಡೆಸಿದ ಬಳಿಕ ಇದೊಂದು ಸುಳ್ಳು ಕರೆ ಎಂಬ ನಿರ್ಧಾರಕ್ಕೆ ಪೊಲೀಸರು ಬಂದಿದ್ದಾರೆ. ರಾತ್ರಿಯೇ ಹಿರಿಯ ಅಧಿಕಾರಿಗಳು ರಾಜಭವನ ಬಳಿ ಬಂದು ಪರಿಶೀಲನೆ ನಡೆಸಿ ಎಲ್ಲಾ ಮಾಹಿತಿಯನ್ನು ಪಡೆದುಕೊಂಡಿದ್ದಾರೆ.

. Ad Widget . Ad Widget

ಸದ್ಯ ಕಾಲ್ ಮಾಡಿದ ಮೊಬೈಲ್ ನಂಬರ್ ಜಾಡು ಹಿಡಿದಿರುವ ಕೇಂದ್ರ ವಿಭಾಗ‌ ಹಾಗೂ ಸೈಬರ್ ಪೊಲೀಸರು ಓರ್ವನನ್ನು ವಶಕ್ಕೆ ಪಡೆದುಕೊಂಡಿರುವ ಮಾಹಿತಿ ಲಭ್ಯವಾಗಿದೆ. ಉಪ್ಪಾರಪೇಟೆ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಶಂಕಿತನನ್ನು ವಶಕ್ಕೆ ಪಡೆದುಕೊಳ್ಳಲಾಗಿದೆ

. Ad Widget . . Ad Widget . Ad Widget

ಬೆದರಿಕೆ ಕರೆ ಬೆನ್ನಲ್ಲೇ ರಾಜಭವನದ ಬಳಿ ಭದ್ರತಾ ಸಿಬ್ಬಂದಿಯನ್ನು ಹೆಚ್ಚಿನ ಸಂಖ್ಯೆಯಲ್ಲಿ ನಿಯೋಜಿಸಲಾಗಿದೆ. ರಾಜಭವನದಲ್ಲಿ ಕೆಲಸ ಮಾಡುವ ಸಿಬ್ಬಂದಿಯನ್ನು ಪರಿಶೀಲನೆ ನಡೆಸಿ ಒಳಗಡೆ ಕಳುಹಿಸಲಾಗುತ್ತಿದೆ.

Leave a Comment

Your email address will not be published. Required fields are marked *