ಸಮಗ್ರ ನ್ಯೂಸ್: ರಾಜಸ್ಥಾನದ ನೂತನ ಮುಖ್ಯಮಂತ್ರಿಯಾಗಿ ಭಜನ್‍ಲಾಲ್ ಶರ್ಮಾ ಅವರನ್ನು ಬಿಜೆಪಿ ಶಾಸಕಾಂಗ ಪಕ್ಷದ ಸಭೆಯಲ್ಲಿ ಆಯ್ಕೆ ಮಾಡಲಾಗಿದೆ. ಇದರ ಜೊತೆಗೆ ಸ್ಪೀಕರ್ ಆಗಿ ಶಾಸಕ ವಾಸುದೇವ್ ದೇವ್ವಾನಿ ಅವರನ್ನು ನೇಮಿಸಲಾಗಿದೆ.
ಸಿಎಂ ರೇಸ್‍ನಲ್ಲಿದ್ದ ಮಾಜಿ ಸಿಎಂ ವಸುಂಧರಾ ರಾಜೇ, ಕೇಂದ್ರ ಸಚಿವರಾದ ಅರ್ಜುನ್ ರಾಮ್ ಮೇಘವಾಲ್, ಗಜೇಂದ್ರ ಸಿಂಗ್ ಶೇಖಾವತ್, ಅಶ್ವಿನಿ ವೃಷ್ಣವ್, ಸಂಸದರಾದ ಬಾಬಾ ಬಾಲಕನಾಥ್, ದಿಯಾ ಕುಮಾರಿ ಸೇರಿದಂತೆ ಅನೇಕ ಹಿರಿಯ ನಾಯಕರನ್ನು ಹಿಂದಿಕ್ಕಿ ಭಜನ್‍ಲಾಲ್ ಶರ್ಮಾ ಮುಖ್ಯಮಂತ್ರಿಯಾಗಿ ಆಯ್ಕೆಯಾಗಿದ್ದಾರೆ.
ಕೇಂದ್ರ ವೀಕ್ಷಕರಾದ ರಕ್ಷಣಾ ಸಚಿವ ರಾಜನಾಥ್ ಸಿಂಗ್, ಸರೋಜ್ ಪಾಂಡೆ ಮತ್ತು ವಿನೋದ್ ತಾವೆ ಅವರು ಶಾಸಕಾಂಗ ಪಕ್ಷದ ಸಭೆ ಮುಕ್ತಾಯಗೊಂಡ ನಂತರ ಭಜನ್‍ಲಾಲ್ ಶರ್ಮಾ ಅವರನ್ನು ರಾಜ್ಯದ ಮುಖ್ಯಮಂತ್ರಿಯಾಗಿ ಘೋಷಿಸಿದ್ದಾರೆ. 200 ಸದಸ್ಯಬಲದ ರಾಜಸ್ಥಾನ ವಿಧಾನಸಭೆಯಲ್ಲಿ ಬಿಜೆಪಿ 115 ಸ್ಥಾನಗಳನ್ನು ಗೆದ್ದಿದ್ದು, ಕಾಂಗ್ರೆಸ್ 69 ಸ್ಥಾನಗಳಲ್ಲಿ ಜಯಿಸಿದೆ.