ಕುಕ್ಕೆಗೆ ಇಸ್ರೋ ನಿರ್ದೇಶಕ ರಾಮಕೃಷ್ಣ ಭೇಟಿ

ಸುಬ್ರಹ್ಮಣ್ಯ: ಭಾರತೀಯ ಬಾಹ್ಯಾಕಾಶ ಸಂಸ್ಥೆಯ ಟೆಲಿಮೆಟ್ರಿ ಟ್ರ್ಯಾಕಿಂಗ್ ಆಂಡ್ ಕಮಾಂಡ್ ನೆಟ್‌ವರ್ಕ್ ನಿರ್ದೇಶಕ ಬಿ.ಎನ್. ರಾಮಕೃಷ್ಣ ಅವರು ಬುಧವಾರ ಕುಕ್ಕೆ ಶ್ರೀ ಸುಬ್ರಹ್ಮಣ್ಯ ಕ್ಷೇತ್ರಕ್ಕೆ ಭೇಟಿ ನೀಡಿದರು.
ಕ್ಷೇತ್ರಕ್ಕೆ ಭೇಟಿ ನೀಡಿದ ಅವರು ಶ್ರೀ ದೇವರ ದರುಶನ ಪಡೆದು ಪ್ರಾರ್ಥನೆ ಸಲ್ಲಿಸಿ ಪ್ರಸಾದ ಸ್ವೀಕರಿಸಿದರು.

Ad Widget ... ..

ದೇವಸ್ಥಾನದ ವ್ಯವಸ್ಥಾಪನಾ ಸಮಿತಿ ಸದಸ್ಯರಾದ ವನಜಾ ವಿ.ಭಟ್, ಶೋಭಾ ಗಿರಿಧರ್, ಕುಮಾರಸ್ವಾಮಿ ವಿದ್ಯಾಸಂಸ್ಥೆಯ ಅಧ್ಯಕ್ಷ ಗಣೇಶ್ ಪ್ರಸಾದ್, ಪ್ರಾಂಶುಪಾಲ ಸಂಕೀರ್ತ್ ಹೆಬ್ಬಾರ್, ದೇವಸ್ಥಾನದ ಶಿಷ್ಟಾಚಾರ ಅಧಿಕಾರಿಗಳಾದ ಜಯರಾಮ ರಾವ್ ಹಾಗೂ ಪ್ರಮೋದ್ ಕುಮಾರ್ ಈ ಸಂದರ್ಭದಲ್ಲಿ ಉಪಸ್ಥಿತರಿದ್ದರು.

Ad Widget

Leave a Comment

Your email address will not be published. Required fields are marked *