Ad Widget .

ತುರ್ತು ನಿರ್ವಹಣಾ ಕೆಲಸ/ ಬೆಂಗಳೂರು – ಮಂಗಳೂರು ರೈಲು ಸಂಚಾರ ರದ್ದು

ಸಮಗ್ರ ನ್ಯೂಸ್: ನೈಋತ್ಯ ರೈಲ್ವೆ, ಮಾರ್ಗ ಮಧ್ಯೆ ತುರ್ತು ನಿರ್ವಹಣಾ ಕೆಲಸ ಕೈಗೊಳ್ಳುವ ಹಿನ್ನೆಲೆಯಲ್ಲಿ ಬೆಂಗಳೂರು ಮತ್ತು ಮಂಗಳೂರು ಮಧ್ಯೆ ಡಿ.14 ರಿಂದ ಡಿ.22ರ ವರೆಗೆ ರೈಲುಗಳ ಸಂಚಾರವನ್ನು ರದ್ದುಗೊಳಿಸಲಾಗಿದೆ.

Ad Widget . Ad Widget .

ಡಿ.14 ರಿಂದ 18 ರ ಅವಧಿಯಲ್ಲಿ ಮಧ್ಯಾಹ್ನ 2 ರಿಂದ ಸಂಜೆ 6ರ ವರೆಗೆ ಮತ್ತು ಸಂಜೆ 6 ರಿಂದ ರಾತ್ರಿ 8ರ ವರೆಗೆ ಲೈನ್ ಬ್ಲಾಕ್, ಸಿಗ್ನಲ್ ಮತ್ತು ದೂರ ಸಂಪರ್ಕ ಬ್ಲಾಕ್ ಜಾರಿಯಲ್ಲಿರಲಿದೆ. ಈ ಸಮಯದಲ್ಲಿ ರೈಲು ಸಂಚಾರಕ್ಕೆ ಹಾಸನದಲ್ಲಿ ಯಾವುದೇ ರೈಲು ಮಾರ್ಗಗಳು ಡಿ.19 ರಿಂದ ಡಿ.22ರ ವರೆಗೆ, ಎಂಜಿನಿಯರಿಂಗ್ ಕೆಲಸಕ್ಕಾಗಿ ಬೆಳಿಗ್ಗೆ 8 ರಿಂದ ಮಧ್ಯಾಹ್ನ 2 ರವರೆಗೆ ಟ್ರಾಫಿಕ್ ಬ್ಲಾಕ್ ನ್ನು ವಿಧಿಸಲಾಗುವುದರಿಂದ ರೈಲನ್ನು ರದ್ದುಗೊಳಿಸಲಾಗಿದೆ. ಇಂಟರ್ ಲಾಕಿಂಗ್, ಸಿಗ್ನಲಿಂಗ್ ಆದ ಬಳಿಕ ಈ ಮಾರ್ಗದ ರೈಲು ಸೇವೆ ಪುನಾರಾರಂಭಗೊಳ್ಳಲಿದೆ ಎಂದು ಪ್ರಕಟಣೆಯಲ್ಲಿ ತಿಳಿಸಿದೆ.

Ad Widget . Ad Widget .

Leave a Comment

Your email address will not be published. Required fields are marked *