Ad Widget .

PUC ಪಾಸ್​ ಆಗಿದ್ಧೀರಾ? ಹಾಗಿದ್ರೆ ಈ ಉದ್ಯೋಗಕ್ಕೆ ಅರ್ಜಿ ಹಾಕಿ

ಸಮಗ್ರ ಉದ್ಯೋಗ: Chitradurga Gram Panchayat ಖಾಲಿ ಇರುವ ಹುದ್ದೆಗಳನ್ನು ಭರ್ತಿ ಮಾಡಲು ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಿದೆ. ಒಟ್ಟು 6 ಲೈಬ್ರರಿ ಸೂಪರ್​ವೈಸರ್ ಹುದ್ದೆಗಳು ಖಾಲಿ ಇದ್ದು, ಆಸಕ್ತರು ಅರ್ಜಿ ಸಲ್ಲಿಸಬಹುದು. ಡಿಸೆಂಬರ್ 26, 2023 ಅರ್ಜಿ ಸಲ್ಲಿಸಲು ಕೊನೆಯ ದಿನವಾಗಿದೆ. ಆಸಕ್ತರು ಆಫ್​ಲೈನ್​/ಪೋಸ್ಟ್​ ಮೂಲಕ ಅಪ್ಲೈ ಮಾಡಬೇಕು.

Ad Widget . Ad Widget .

ಅರ್ಜಿ ಸಲ್ಲಿಕೆಗೂ ಮುನ್ನ ಹುದ್ದೆಯ ಕುರಿತಾಗಿ ಮಾಹಿತಿ, ವಿದ್ಯಾರ್ಹತೆ, ಸಂಬಳ, ವಯೋಮಿತಿ, ಅರ್ಜಿ ಶುಲ್ಕ, ಆಯ್ಕೆ ಪ್ರಕ್ರಿಯೆ ಕುರಿತಾಗಿ ತಿಳಿಯುವುದು ಮುಖ್ಯ. ಈ ಎಲ್ಲದರ ಕುರಿತಾಗಿ ಇಲ್ಲಿದೆ ಮಾಹಿತಿ.

Ad Widget . Ad Widget .

ಶೈಕ್ಷಣಿಕ ಅರ್ಹತೆ:
ಚಿತ್ರದುರ್ಗ ಗ್ರಾಮ ಪಂಚಾಯತ್ ನೇಮಕಾತಿ ಅಧಿಸೂಚನೆ ಪ್ರಕಾರ, ಅಭ್ಯರ್ಥಿಗಳು ಯಾವುದೇ ಮಾನ್ಯತೆ ಪಡೆದ ವಿಶ್ವವಿದ್ಯಾಲಯ/ಮಂಡಳಿಯಿಂದ ಕಡ್ಡಾಯವಾಗಿ ಪಿಯುಸಿ, ಲೈಬ್ರರಿ ಸೈನ್ಸ್​ನಲ್ಲಿ ಸರ್ಟಿಫಿಕೇಶನ್ ಕೋರ್ಸ್ ಪೂರ್ಣಗೊಳಿಸಿರಬೇಕು.

ವಯೋಮಿತಿ:
ಚಿತ್ರದುರ್ಗ ಗ್ರಾಮ ಪಂಚಾಯತ್ ನೇಮಕಾತಿ ಅಧಿಸೂಚನೆ ಪ್ರಕಾರ, ಅಭ್ಯರ್ಥಿಗಳ ವಯಸ್ಸು ಡಿಸೆಂಬರ್ 26, 2023ಕ್ಕೆ ಕನಿಷ್ಠ 18 ವರ್ಷ ಮತ್ತು ಗರಿಷ್ಠ 35 ವರ್ಷ ಮೀರಿರಬಾರದು.

ವಯೋಮಿತಿ ಸಡಿಲಿಕೆ:
SC/ST/ಪ್ರವರ್ಗ-I ಅಭ್ಯರ್ಥಿಗಳು: 05 ವರ್ಷಗಳು
ಪ್ರವರ್ಗ-2A/2B/3A & 3B ಅಭ್ಯರ್ಥಿಗಳು: 03 ವರ್ಷಗಳು
PWD/ವಿಧವೆ ಅಭ್ಯರ್ಥಿಗಳು: 10 ವರ್ಷಗಳು

ಆಯ್ಕೆ ಪ್ರಕ್ರಿಯೆ:
ಅಭ್ಯರ್ಥಿಗಳನ್ನು ಮೆರಿಟ್ ಲಿಸ್ಟ್​ ಆಧಾರದ ಮೇಲೆ ಆಯ್ಕೆ ಮಾಡಿಕೊಳ್ಳಲಾಗುತ್ತದೆ.

ವೇತನ:
ಚಿತ್ರದುರ್ಗ ಗ್ರಾಮ ಪಂಚಾಯತ್ ನೇಮಕಾತಿ ಅಧಿಸೂಚನೆ ಪ್ರಕಾರ, ಆಯ್ಕೆಯಾಗುವ ಅಭ್ಯರ್ಥಿಗಳಿಗೆ ತಿಂಗಳಿಗೆ 15196.72 ರೂ. ಸಂಬಳ ಕೊಡಲಾಗುತ್ತದೆ.

ಉದ್ಯೋಗದ ಸ್ಥಳ:
ಚಿತ್ರದುರ್ಗ ಗ್ರಾಮ ಪಂಚಾಯತ್ ನೇಮಕಾತಿ ಅಧಿಸೂಚನೆ ಪ್ರಕಾರ, ಆಯ್ಕೆಯಾಗುವ ಅಭ್ಯರ್ಥಿಗಳಿಗೆ ಚಿತ್ರದುರ್ಗದಲ್ಲಿ ಪೋಸ್ಟಿಂಗ್ ನೀಡಲಾಗುತ್ತದೆ.
ಅರ್ಜಿ ಸಲ್ಲಿಸಲು ಕೊನೆಯ ದಿನ: ಡಿಸೆಂಬರ್ 26, 2023

ಅರ್ಜಿ ಹಾಕೋದು ಹೇಗೆ?
ಅಭ್ಯರ್ಥಿಗಳು ಭರ್ತಿ ಮಾಡಿದ ಅರ್ಜಿ ನಮೂನೆಯನ್ನು ಅಗತ್ಯ ದಾಖಲಾತಿಗಳೊಂದಿಗೆ ಈ ಕೆಳಕಂಡ ವಿಳಾಸಕ್ಕೆ ಕಳುಹಿಸಬೇಕು.
ಆಯ್ಕೆ ಸಮಿತಿಯ ಸದಸ್ಯ ಕಾರ್ಯದರ್ಶಿಗಳು ಮತ್ತು ಉಪ ಭದ್ರತೆಗಳು
ಜಿಲ್ಲಾ ಪಂಚಾಯತ್
ಕ್ರೀಡಾಂಗಣ ರಸ್ತೆ
ಚಿತ್ರದುರ್ಗ
ರಾಜ್ಯ ಸರ್ಕಾರದ ಉದ್ಯೋಗ ಹುಡುಕುತ್ತಿರುವ ಅಭ್ಯರ್ಥಿಗಳು ಈ ಅವಕಾಶವನ್ನು ಸದುಪಯೋಗಪಡಿಸಿಕೊಳ್ಳಿ.

Leave a Comment

Your email address will not be published. Required fields are marked *