Ad Widget .

ಎಲೆಕ್ಟ್ರಿಕ್ ವಾಹನಗಳಿಗೆ ತೆರಿಗೆ ಇಲ್ಲ/ ರಾಮಲಿಂಗಾರೆಡ್ಡಿ ಭರವಸೆ

ಸಮಗ್ರ ನ್ಯೂಸ್: ರಾಜ್ಯದಲ್ಲಿ ಎಲೆಕ್ಟ್ರಿಕ್ ವಾಹನಗಳಿಗೆ ತೆರಿಗೆ ವಿಧಿಸುವುದಿಲ್ಲ ಎಂದು ಸಾರಿಗೆ ಸಚಿವ ರಾಮಲಿಂಗಾರೆಡ್ಡಿ ಭರವಸೆ ನೀಡಿದ್ದಾರೆ. ಈ ಕುರಿತು ವಿಧಾನಸಭೆಯಲ್ಲಿ ಎಲೆಕ್ಟಿಕ್, ವಾಣಿಜ್ಯ ಮತ್ತು ಹಳದಿ ಬೋರ್ಡ್ ವಾಹನಗಳ ಹೊರತುಪಡಿಸಿ ನೂತನ ವಾಹನಗಳಿಗೆ ತೆರಿಗೆ ವಿಧಿಸುವ ಕರ್ನಾಟಕ ಮೋಟಾರ್ ವಾಹನಗಳ ತೆರಿಗೆ ನಿರ್ಧಾರಣೆ ತಿದ್ದುಪಡಿ ವಿಧೇಯಕ ಅಂಗೀಕಾರಗೊಂಡಿದೆ.

Ad Widget . Ad Widget .

ಈ ಹಿನ್ನಲೆಯಲ್ಲಿ ಪ್ರತಿಪಕ್ಷದ ಸದಸ್ಯರು ಎಲೆಕ್ಟಿಕ್ ವಾಹನಗಳಿಗೆ ತೆರಿಗೆ ವಿಧಿಸಬಾರದು, ಸಬ್ಸಿಡಿ ನೀಡಬೇಕು ಎಂದು ಆಗ್ರಹಿಸಿದ್ದು, ಕಾಂಗ್ರೆಸ್ ಶಾಸಕ ಆರ್.ವಿ. ದೇಶಪಾಂಡೆ ಕೂಡ ಇದನ್ನು ಬೆಂಬಲಿಸಿ ಎಲೆಕ್ಟಿಕ್ ವಾಹನಗಳಿಗೆ ತೆರಿಗೆ ವಿಧಿಸಿದಂತೆ ಸಲಹೆ ನೀಡಿದರು. ಇದಕ್ಕೆ ಪ್ರತಿಕ್ರಿಯೆ ನೀಡಿದ ಸಾರಿಗೆ ಸಚಿವ ರಾಮಲಿಂಗಾರೆಡ್ಡಿ ತಿದ್ದುಪಡಿ ಮಾಡುವುದಾಗಿ ಭರವಸೆ ನೀಡಿದರು.

Ad Widget . Ad Widget .

Leave a Comment

Your email address will not be published. Required fields are marked *