ಡಿಸೆಂಬರ್ 24, 25 ಮತ್ತು 26ರಂದು ದತ್ತಜಯಂತಿ/ ಚಿಕ್ಕಮಗಳೂರಿನ ಪ್ರವಾಸಿ ತಾಣಗಳಿಗೆ ನಿರ್ಬಂಧ

ಸಮಗ್ರ ನ್ಯೂಸ್: ಡಿಸೆಂಬರ್ 24, 25 ಮತ್ತು 26ರಂದು ಚಂದ್ರದ್ರೋಣ ಪರ್ವತದಲ್ಲಿರುವ ದತ್ತಪೀಠದಲ್ಲಿ ದತ್ತಜಯಂತಿ ನಡೆಯಲಿರುವ ಕಾರಣ ಡಿಸೆಂಬರ್ 22ರಿಂದ 27ರವರೆಗೆ ಚಿಕ್ಕಮಗಳೂರು ಜಿಲ್ಲೆಯ ಮುಳ್ಳಯ್ಯನಗಿರಿ, ಸೀತಾಳಯ್ಯನಗಿರಿ, ಗಾಳಿಕೆರೆ, ಮಾಣಿಕ್ಯಾಧಾರಾ ಸೇರಿದಂತೆ ಹಲವು ಪ್ರವಾಸಿ ತಾಣಗಳಿಗೆ ನಿರ್ಬಂಧ ಹೇರಲಾಗಿದೆ.

Ad Widget ... ..

ಡಿಸೆಂಬರ್ 26ಕ್ಕೆ 20 ಸಾವಿರಕ್ಕೂ ಅಧಿಕ ಮಾಲಾಧಾರಿಗಳು ದತ್ತಪೀಠಕ್ಕೆ ಆಗಮಿಸಲಿರುವ ಕಾರಣ, ಮುಂಜಾಗ್ರತಾ ಕ್ರಮವಾಗಿ ಪ್ರವಾಸಿಗರಿಗೆ ನಿರ್ಬಂಧ ಹೇರಲಾಗಿದೆ ಎಂದು ಜಿಲ್ಲಾಡಳಿತ ತಿಳಿಸಿದೆ.

Ad Widget

ಡಿಸೆಂಬರ್ 23, 24 ವಾರಾಂತ್ಯ ಮತ್ತು 25ರಂದು ಕ್ರಿಸ್ಮಸ್ ಪ್ರಯುಕ್ತ ಸಾರ್ವಜನಿಕ ರಜೆ ಇದೆ. ಹೀಗಾಗಿ ಈ ಸಂದರ್ಭದಲ್ಲಿ ಅನೇಕರು ಪ್ರವಾಸಕ್ಕೆ ಪ್ಲಾನ್ ಮಾಡಿರುವ ಸಾಧ್ಯತೆ ಇದ್ದು, ಚಿಕ್ಕಮಗಳೂರಿನ ಪ್ರವಾಸಿ ತಾಣಗಳಿಗೆ ಭೇಟಿ ನೀಡಲು ಯೋಚಿಸಿರುವ ಸಾಧ್ಯತೆಯೂ ಇದೆ. ಹೀಗಾಗಿ ಜಿಲ್ಲಾಡಳಿತ ಮುಂಚಿತವಾಗಿಯೇ ಮಾಹಿತಿ ನೀಡಿದೆ.

Leave a Comment

Your email address will not be published. Required fields are marked *