ಸಮಗ್ರ ನ್ಯೂಸ್: ಸುಳ್ಯ ತಾಲೂಕಿನ ಬಳ್ಪ ರಕ್ಷಿತಾರಣ್ಯದ ಮೂಲಕ ಹಾದು ಹೋಗುವ ಗುತ್ತಿಗಾರು-ಬಳ್ಪ ರಸ್ತೆ ನಡುವೆ ರಸ್ತೆ ಬದಿಯಲ್ಲಿ ಮಂಗಗಳ ಮೃತದೇಹ ಪತ್ತೆಯಾಗಿದೆ. ರಾಶಿ ರಾಶಿ ಮೃತದೇಹಗಳು ಇದ್ದು ಸುಮಾರು 30 ಕ್ಕೂ ಅಧಿಕ ಮಂಗಗಳು ಸತ್ತು ಬಿದ್ದಿರುವ ಸ್ಥಿತಿಯಲ್ಲಿದೆ.
ಡಿ.14ರ ಮಧ್ಯಾಹ್ನದ ವೇಳೆ ಸಾಮಾಜಿಕ ಜಾಲತಾಣದ ಮೂಲಕ ಮಂಗಗಳ ಮೃತದೇಹ ಇರುವುದು ಬೆಳಕಿಗೆ ಬಂದಿದೆ. ಸ್ಥಳಕ್ಕೆ ಅರಣ್ಯ ಇಲಾಖೆಯ ಸಿಬಂದಿಗಳು ಆಗಮಿಸಿದ್ದಾರೆ. ಎಲ್ಲೋ ಬೇರೆಡೆ ಕೋತಿಗಳನ್ನು ಕೊಂದು ಕಾಡೊಳಗೆ ಹಾಕಿರುವ ಶಂಕೆ ವ್ಯಕ್ತವಾಗಿದ್ದು, ಅರಣ್ಯ ಇಲಾಖೆ ತನಿಖೆ ನಡೆಸುತ್ತಿದೆ.