Ad Widget .

ಸುಬ್ರಹ್ಮಣ್ಯ ಸಮೀಪದ ಕಾಡಿನಲ್ಲಿ ಕೋತಿಗಳ ಮಾರಣಹೋಮ| ಕೊಂದು ತಂದು ಎಸೆದಿರುವ ಕಳೇಬರ ಪತ್ತೆ

ಸಮಗ್ರ ನ್ಯೂಸ್: ಸುಳ್ಯ ತಾಲೂಕಿನ ಬಳ್ಪ ರಕ್ಷಿತಾರಣ್ಯದ ಮೂಲಕ ಹಾದು ಹೋಗುವ ಗುತ್ತಿಗಾರು-ಬಳ್ಪ ರಸ್ತೆ ನಡುವೆ ರಸ್ತೆ ಬದಿಯಲ್ಲಿ ಮಂಗಗಳ ಮೃತದೇಹ ಪತ್ತೆಯಾಗಿದೆ. ರಾಶಿ ರಾಶಿ ಮೃತದೇಹಗಳು ಇದ್ದು ಸುಮಾರು 30 ಕ್ಕೂ ಅಧಿಕ ಮಂಗಗಳು ಸತ್ತು ಬಿದ್ದಿರುವ ಸ್ಥಿತಿಯಲ್ಲಿದೆ.

Ad Widget . Ad Widget .

ಡಿ.14ರ ಮಧ್ಯಾಹ್ನದ ವೇಳೆ ಸಾಮಾಜಿಕ ಜಾಲತಾಣದ ಮೂಲಕ ಮಂಗಗಳ ಮೃತದೇಹ ಇರುವುದು ಬೆಳಕಿಗೆ ಬಂದಿದೆ. ಸ್ಥಳಕ್ಕೆ ಅರಣ್ಯ ಇಲಾಖೆಯ ಸಿಬಂದಿಗಳು ಆಗಮಿಸಿದ್ದಾರೆ. ಎಲ್ಲೋ ಬೇರೆಡೆ ಕೋತಿಗಳನ್ನು ಕೊಂದು ಕಾಡೊಳಗೆ ಹಾಕಿರುವ ಶಂಕೆ ವ್ಯಕ್ತವಾಗಿದ್ದು, ಅರಣ್ಯ ಇಲಾಖೆ ತನಿಖೆ ನಡೆಸುತ್ತಿದೆ.

Ad Widget . Ad Widget .

Leave a Comment

Your email address will not be published. Required fields are marked *