Ad Widget .

ರಾತ್ರಿಯಿಡೀ ಯಕ್ಷಗಾನ ನಡೆಸಲು ಹೈಕೋರ್ಟ್ ಗ್ರೀನ್ ಸಿಗ್ನಲ್| ಕಾಲಮಿತಿ ಪ್ರದರ್ಶನಕ್ಕೆ ಬೀಳುತ್ತಾ ತೆರೆ?

ಸಮಗ್ರ ನ್ಯೂಸ್: ಕಟೀಲು ಶ್ರೀ ದುರ್ಗಾಪರಮೇಶ್ವರಿ ಯಕ್ಷಗಾನ ಮೇಳಗಳು ಇನ್ನು ಮುಂದೆ ರಾತ್ರಿಯಿಡೀ ಯಕ್ಷಗಾನ ಪ್ರದರ್ಶನ ನೀಡಬಹುದು ಎಂದು ರಾಜ್ಯ ಹೈಕೋರ್ಟ್‌ ಗ್ರೀನ್‌ ಸಿಗ್ನಲ್‌ ನೀಡಿದೆ. ರಾತ್ರಿಯಿಡೀ ಯಕ್ಷಗಾನ ಪ್ರದರ್ಶನ ನೀಡುವುದಕ್ಕೆ ಜಿಲ್ಲಾಡಳಿತ ಹಾಕಿದ್ದ ನಿರ್ಬಂಧವನ್ನು ಹೈಕೋರ್ಟ್​ ತೆರವು ಮಾಡಿದೆ.

Ad Widget . Ad Widget .

ಹಾಗಿದ್ದರೆ ಕಟೀಲು ಮೇಳಗಳು ಈಗ ನಡೆಸುತ್ತಿರುವ ಸಂಜೆ 5 ರಿಂದ ರಾತ್ರಿ 12ರವರೆಗಿನ ಕಾಲಮಿತಿ ಪ್ರದರ್ಶನಕ್ಕೆ ತೆರೆ ಬೀಳುತ್ತದೆಯೇ? ಎಂಬ ಪ್ರಶ್ನೆ ಅಭಿಮಾನಿಗಳಲ್ಲಿ ಹುಟ್ಟಿಕೊಂಡಿದೆ. ಆದರೆ, ಸದ್ಯ ಸಿಗುತ್ತಿರುವ ಮಾಹಿತಿಗಳ ಪ್ರಕಾರ, ಹೈಕೋರ್ಟ್‌ ಗ್ರೀನ್‌ ಸಿಗ್ನಲ್‌ ಕೊಟ್ಟರೂ ಕಟೀಲು ಮೇಳಗಳ ಪ್ರದರ್ಶನ ಇಡಿ ರಾತ್ರಿಗೆ ವಿಸ್ತರಿಸುವ ಸಾಧ್ಯತೆ ಕಡಿಮೆ. ತೀರಾ ಅಗತ್ಯವೆನ್ನಿಸುವ ಸನ್ನಿವೇಶಗಳನ್ನು ಹೊರತುಪಡಿಸಿ ಕಾಲ ಮಿತಿ ಪ್ರದರ್ಶನವೇ ಮುಂದುವರಿಯಲಿದೆ.

Ad Widget . Ad Widget .

2022ರ ನವೆಂಬರ್ 15ರಂದು ದಕ್ಷಿಣ ಕನ್ನಡ ಜಿಲ್ಲೆಯ ಜಿಲ್ಲಾಧಿಕಾರಿಗಳು ಯಕ್ಷಗಾನ ಮೇಳಗಳಿಗೆ ಸಮಯ ನಿರ್ಬಂಧವನ್ನು ವಿಧಿಸಿ, ಸಂಜೆ 5 ರಿಂದ 12.30 ರವರೆಗೆ ಮಾತ್ರ ಪ್ರದರ್ಶನಕ್ಕೆ ಅವಕಾಶ ನೀಡಿ ಆದೇಶ ಹೊರಡಿಸಿದ್ದರು. ರಾತ್ರಿಯಿಂದ ಬೆಳಗಿನ ಜಾವದವರೆಗೆ ಯಕ್ಷಗಾನ ಪ್ರದರ್ಶನಕ್ಕೆ ಇರುವ ನಿರ್ಬಂಧ ಪ್ರಶ್ನಿಸಿ ಬೆಂಗಳೂರಿನ ಭಕ್ತ ಹಾಗೂ ದೇವಸ್ಥಾನದ ಭಕ್ತರಾದ ಕೃಷ್ಣ ಕುಮಾರ್ ಅವರು ಅರ್ಜಿ ಸಲ್ಲಿಸಿದ್ದರು. ಇದರ ವಿಚಾರಣೆ ನಡೆಸಿದ ನ್ಯಾಯಮೂರ್ತಿ ಎಂ ನಾಗಪ್ರಸನ್ನ ಅವರಿದ್ದ ಪೀಠ ನಿರ್ಬಂಧ ತೆರವುಗೊಳಿಸಿದೆ.

ನಿರ್ಬಂಧ ವಿಧಿಸಿದ್ದು ಯಾಕೆ?
ಸಾಂಪ್ರದಾಯಿಕ ಯಕ್ಷಗಾನ ಪ್ರದರ್ಶನಗಳು ‘ಶಬ್ದ ಮಾಲಿನ್ಯ (ನಿಯಂತ್ರಣ) ನಿಯಮಗಳು, 2000’ ರ ಅಡಿಯಲ್ಲಿ ಅನುಮತಿಸಿರುವ ಡೆಸಿಬಲ್ ಮಟ್ಟವನ್ನು ಮೀರುತ್ತವೆ. ಹೀಗಾಗಿ ಶಬ್ದ ಮಾಲಿನ್ಯವನ್ನು ಕಡಿಮೆ ಮಾಡುವ ಆಧಾರದ ಮೇಲೆ ನಿರ್ಬಂಧ ಹೇರಲಾಗಿತ್ತು. ರಾತ್ರಿ ಇಡೀ ಯಕ್ಷಗಾನ ಪ್ರದರ್ಶನಕ್ಕೆ ಕೆಲವು ಕಡೆ ಆಕ್ಷೇಪ ವ್ಯಕ್ತವಾಗಿತ್ತು. ಅದರಲ್ಲೂ ಪರೀಕ್ಷೆ ಸಂದರ್ಭದಲ್ಲಿ ಮಕ್ಕಳಿಗೆ, ವಯಸ್ಸಾದವರಿಗೆ ತೊಂದರೆ ಎಂಬ ವಾದ ಕೇಳಿಬಂದಿತ್ತು. ಕೊರೊನಾ ಕಾಲದಲ್ಲಿ ಯಕ್ಷಗಾನಗಳ ಪ್ರದರ್ಶನವನ್ನು ಕಾಲಮಿತಿಗೆ ಒಳಪಡಿಸಲಾಗಿತ್ತು. ಅದನ್ನೇ ಬಳಿಕ ಮುಂದುವರಿಸಲಾಗಿತ್ತು.

Leave a Comment

Your email address will not be published. Required fields are marked *