“ಸ್ತ್ರೀ ಶಕ್ತಿ ಸಂಘಮಮ್”/ ಎರಡು ಲಕ್ಷ ಮಹಿಳೆಯರನ್ನು ಉದ್ದೇಶಿಸಿ ಮಾತನಾಡಲಿದ್ದಾರೆ ಮೋದಿ

ಸಮಗ್ರ ನ್ಯೂಸ್: ಸಂಸತ್ತಿನ ಉಭಯ ಸದನಗಳಲ್ಲಿ ಮಹಿಳಾ ಮೀಸಲಾತಿ ಮಸೂದೆಯು ಅಂಗೀಕಾರಗೊಂಡಿರುವ ಕಾರಣ ಪ್ರಧಾನಿ ನರೇಂದ್ರ ಮೋದಿ ಅವರನ್ನು ಅಭಿನಂದಿಸಲು ಜ.2ರಂದು ಕೇರಳ ಬಿಜೆಪಿ ಘಟಕವು ‘ಸ್ತ್ರೀ ಶಕ್ತಿ ಸಂಘಮಮ್’ ಎನ್ನುವ ಬೃಹತ್ ಸಮಾವೇಶವನ್ನು ಆಯೋಜಿಸಿದ್ದು, ಈ ಸಂದರ್ಭದಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರು ಎರಡು ಲಕ್ಷ ಮಹಿಳೆಯರನ್ನು ಉದ್ದೇಶಿಸಿ ಮಾತನಾಡಲಿದ್ದಾರೆ.

Ad Widget ... ..

ಈ ಕುರಿತು ಮಾಹಿತಿ ನೀಡಿದ ಪಕ್ಷದ ಕೇರಳ ರಾಜ್ಯ ಘಟಕದ ಅಧ್ಯಕ್ಷ ಕೆ.ಸುರೇಂದ್ರನ್, ಅಂಗನವಾಡಿ ಶಿಕ್ಷಕಿಯರು, ಆಶಾ ಕಾರ್ಯಕರ್ತೆಯರು, ಉದ್ಯಮಿಗಳು, ಮನರೇಗಾ ಕಾರ್ಮಿಕರು ಮತ್ತು ಸಾಮಾಜಿಕ, ಸಾಂಸ್ಕøತಿಕ ಹೋರಾಟಗಾರರು ಸೇರಿದಂತೆ ವಿವಿಧ ಹಿನ್ನೆಲೆಯ ಮಹಿಳೆಯರು ಕಾರ್ಯಕ್ರಮದಲ್ಲಿ ಭಾಗಿಯಾಗಲಿದ್ದಾರೆ ಎಂದು ತಿಳಿಸಿದರು.

Ad Widget

ಪ್ರಧಾನಿ ನರೇಂದ್ರ ಮೋದಿ ಅವರೂ ಕಾರ್ಯಕ್ರಮದಲ್ಲಿ ಭಾಗಿಯಾಗಲಿದ್ದಾರೆ. ದಕ್ಷಿಣ ರಾಜ್ಯಗಳ ಯಾವ ರಾಜಕೀಯ ಪಕ್ಷವೂ ಈವರೆಗೆ ಮಹಿಳೆಯರಿಗಾಗಿ ಇಂಥ ಬೃಹತ್ ಸಮಾವೇಶವನ್ನು ಏರ್ಪಡಿಸಿಲ್ಲ ಎಂದು ಅವರು ಹೇಳಿದರು.

Leave a Comment

Your email address will not be published. Required fields are marked *