Ad Widget .

ಕಡಬ: ಕಾರು ಮತ್ತು ಸ್ಕೂಟರ್ ನಡುವೆ ಅಪಘಾತ| ಶಾಲಾ ವಿದ್ಯಾರ್ಥಿ ಸ್ಥಳದಲ್ಲೇ ಸಾವು

ಸಮಗ್ರ ನ್ಯೂಸ್: ಕಾರು ಮತ್ತು ಸ್ಕೂಟರ್ ನಡುವೆ ನಡೆದ ಭೀಕರ ಅಪಘಾತದಲ್ಲಿ ಶಾಲಾ ಬಾಲಕನೋರ್ವ ಸ್ಥಳದಲ್ಲೇ ಮೃತಪಟ್ಟ ಘಟನೆ‌ ಕಡಬ ಸಮೀಪದ ಕಳಾರದಲ್ಲಿ ಶುಕ್ರವಾರ ತಡರಾತ್ರಿ ಸಂಭವಿಸಿದೆ.

Ad Widget . Ad Widget .

ಮೃತ ಬಾಲಕನನ್ನು ಕಳಾರದಲ್ಲಿ ವಾಸವಿರುವ ಚಂದ್ರಶೇಖರ ಅವರ ಪುತ್ರ , ಕಡಬದ ಸರಸ್ವತಿ ವಿದ್ಯಾ ಸಂಸ್ಥೆಯ ಎಂಟನೇ ತರಗತಿ ವಿದ್ಯಾರ್ಥಿ ಬಿಪಿನ್ ಎಂದು ಗುರುತಿಸಲಾಗಿದೆ.

Ad Widget . Ad Widget .

ಸ್ಕೂಟರ್ ಚಲಾಯಿಸುತ್ತಿದ್ದ ಚಂದ್ರಶೇಖರ ಮತ್ತು ಅವರ ಇನ್ನೋರ್ವ ಪುತ್ರಿಗೆ ಗಂಭೀರ ಗಾಯಗಳಾಗಿದ್ದು ಪ್ರಾಣಾಪಾಯದಿಂದ ಪಾರಾಗಿದ್ದಾರೆ.

ಸರಸ್ವತಿ ಶಾಲೆಯಲ್ಲಿ ನಿನ್ನೆ ಕ್ರೀಡೋತ್ಸವ ಮತ್ತು ವಾರ್ಷಿಕೋತ್ಸವವಿದ್ದು ಈ ಕಾರ್ಯಕ್ರಮ ಮುಗಿದ ಚಂದ್ರಶೇಖರರು ಮಕ್ಕಳೊಂದಿಗೆ ವಾಪಸ್ ಆಗುತ್ತಿದ್ದ ವೇಳೆ ಘಟನೆ ಸಂಭವಿಸಿದೆ. ಪಂಜ ಸಮೀಪದ ಕೂತ್ಕುಂಜದ ಪರಮೇಶ್ವರ ಎಂಬವರು ಚಲಾಯಿಸುತ್ತಿದ್ದ ಕಾರು ಢಿಕ್ಕಿ ಹೊಡೆದಿದೆ‌ ಎನ್ನಲಾಗಿದ್ದು, ಕಡಬ ಪೊಲೀಸರು ಭೇಟಿ ನೀಡಿ ಪ್ರಕರಣ ದಾಖಲಿಸಿಕೊಂಡಿದ್ದಾರೆ

Leave a Comment

Your email address will not be published. Required fields are marked *