Ad Widget .

ಮುಳುಗುತ್ತಿರುವವನನ್ನು ರಕ್ಷಿಸಲು ಹೋಗಿ ಒಂದೇ ಕುಟುಂಬದ ಐವರು ನೀರುಪಾಲು

ಸಮಗ್ರ ನ್ಯೂಸ್: ಈಜಲು ಹೋದವನನ್ನು ರಕ್ಷಿಸಲು ಹೋಗಿ ಒಂದೇ ಕುಟುಂಬದ ಐವರು ನೀರುಪಾಲಾಗಿರುವಂತಹ ಘಟನೆ ಉತ್ತರ ಕನ್ನಡ ಜಿಲ್ಲೆಯ ಶಿರಸಿ ತಾಲೂಕಿನ ಸಹಸ್ರಲಿಂಗ ಬಳಿಯ ಭೂತದಗುಂಡಿಯಲ್ಲಿ ನಡೆದಿದೆ.

Ad Widget . Ad Widget .

ರಾಮನಬೈಲಿನ ನಿವಾಸಿಗಳಾದ ಮೌಲಾನ ಮಹಮ್ಮದ್ ಸಲೀಮ್ ಕಲೀಲ್ ರೆಹಮಾನ್ (44), ನಾದಿಯಾ ನೂರ್ (20), ನಬಿಲ್ ನೂರ್ ಅಹ್ಮದ್‌(22), ವಿದ್ಯಾರ್ಥಿಗಳಾದ ಉಮರ್ ಸಿದ್ದಿಕ್(14), ಮಿಸ್ಬಾ ತಬಸುಮ್(21) ಮೃತರು. ಭಾನುವಾರ ರಜೆ ಹಿನ್ನೆಲೆಯಲ್ಲಿ ಈಜಲು ತೆರಳಿದ್ದಾಗ ಈ ಅವಘಡ ಸಂಭವಿಸಿದೆ.

Ad Widget . Ad Widget .

ಓರ್ವನ ಮೃತ ದೇಹ ಪತ್ತೆಯಾಗಿದ್ದು, ನಾಲ್ವರ ಮೃತ ದೇಹಕ್ಕಾಗಿ ಅಗ್ನಿಶಾಮಕ ಸಿಬ್ಬಂದಿಗಳಿಂದ ಕಾರ್ಯಾಚರಣೆ ಮುಂದುವರೆದಿದೆ. ಸ್ಥಳಕ್ಕೆ ಶಿರಸಿ ಗ್ರಾಮೀಣ ಪೊಲೀಸರು ಭೇಟಿ ನೀಡಿದ್ದಾರೆ.

Leave a Comment

Your email address will not be published. Required fields are marked *