ತಾನು ಓದಿದ್ದ ಸರ್ಕಾರಿ ಶಾಲೆಯನ್ನೆ ದತ್ತು ಪಡೆದ ರಿಷಬ್ ಶೆಟ್ಟಿ..

ಸಮಗ್ರ ನ್ಯೂಸ್: ಕಾಂತರ-1 ಸಿನಿಮಾ ಶೂಟಿಂಗ್ ನಲ್ಲಿ ಬ್ಯುಸಿ ಇರುವ ರಿಷಬ್ ಶೆಟ್ಟಿ ಈಗ ಹೊಸ ವಿಷಯದಲ್ಲಿ ಮುನ್ನೆಲೆಗೆ ಬಂದಿದ್ದಾರೆ. ಹೌದು ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆ ಕಾಸರಗೋಡು ಸಿನಿಮಾ ಮೂಲಕ ಕನ್ನಡ ಶಾಲೆಗಳ ಉಳಿವಿನ ಬಗ್ಗೆ ಜಾಗೃತಿಮೂಡಿಸಿ ಹಲವಾರು ಕನ್ನಡ ಶಾಲೆಗಳ ಉಳಿವಿಗೆ ಕಾರಣನಾಗಿದ್ದರು ನಟ, ನಿರ್ದೇಶಕ ರಿಷಬ್ ಶೆಟ್ಟಿ. ಕೇವಲ ಸಿನಿಮಾದಲ್ಲಿ ಮಾತ್ರವಲ್ಲದೇ ಕನ್ನಡ ಶಾಲೆಗಳನ್ನು ಉಳಿಸುವ ನಿಟ್ಟಿನಲ್ಲಿ ರಿಷಬ್ ಶೆಟ್ಟಿ ಫೌಂಡೇಶನ್ ಮೂಲಕ ಅಳಿವಿನಂಚಿನಲ್ಲಿದ್ದ ತಾನು ಓದಿದ ಕೆರಾಡಿಯ ಸರ್ಕಾರಿ ಕನ್ನಡ ಶಾಲೆಯನ್ನು ದತ್ತು ಪಡೆದಿದ್ದಾರೆ.

Ad Widget ... ..

ಕೆರಾಡಿಗೆ ಭೇಟಿ ನೀಡಿದ ಸಂದರ್ಭದಲ್ಲಿ ಶಾಲೆಗೆ ಭೇಟಿನೀಡಿ ಕನ್ನಡ ಶಾಲೆ ಉಳಿಸುವ ಮತ್ತು ಬೆಳೆಸುವ ತನ್ನ ಕನಸನ್ನು ಬಿಚ್ಚಿಟ್ಟರು. ಈ ಸಂದರ್ಭದಲ್ಲಿ ಊರ ಪ್ರಮುಖರು, ಹಿರಿಯರು ಉಪಸ್ಥಿತರಿದ್ದು ಹುಟ್ಟೂರಿನ ಶಾಲೆಯ ದತ್ತು ರಿಷಬ್ ಶೆಟ್ಟಿ ಯವರನ್ನು ಅಭಿನಂದಿಸಿದರು. ರಿಷಬ್ ಶೆಟ್ಟಿ ಅವರು ಕೆರಾಡಿ ಶಾಲೆಯಲ್ಲಿಯೇ ಓದಿದ್ದರು. ಈ ವಿಚಾರವನ್ನು ನಟ ಹಲವಾರು ಸಂದರ್ಭದಲ್ಲಿ ಸಂದರ್ಶನಗಳಲ್ಲಿ ತಿಳಿಸಿದ್ದಾರೆ. ಈಗ ಅದೇ ಶಾಲೆ ದತ್ತು ಸ್ವೀಕರಿಸಿದ್ದಾರೆ.

Ad Widget

Leave a Comment

Your email address will not be published. Required fields are marked *