ಕುಶಾಲನಗರ: ಕೋವಿಡ್ ರೂಪಾಂತರಿ ಬಗ್ಗೆ ಹೆಚ್ಚಿನ ಜಾಗೃತಿ ವಹಿಸಲು ಕ್ರಮ

ಸಮಗ್ರ ನ್ಯೂಸ್: 60 ವರ್ಷ ಮೇಲ್ಪಟ್ಟವರು, ಹೃದಯ ಸಂಬಂಧಿ ಸಮಸ್ಯೆ, ಕೊರೋನಾ ಲಕ್ಷಣ ಕಂಡುಬಂದಲ್ಲಿ ಕಡ್ಡಾಯ ಮಾಸ್ಕ್‌ ಧರಿಸಬೇಕು ಅಗತ್ಯ ಕ್ರಮಕೈಗೊಳ್ಳುವ ಕುರಿತು ಅಧಿಕಾರಿಗಳೊಂದಿಗೆ ಚರ್ಚಿಸಿದ್ದೇನೆ. ಕೇಂದ್ರ ಸರ್ಕಾರ ತಜ್ಞರ ಜೊತೆ ಚರ್ಚೆ ಮಾಡಲಾಗಿದೆ.
ಕುಶಾಲನಗರದಲ್ಲಿ ಆರೋಗ್ಯ ಸಚಿವ ದಿನೇಶ್ ಗುಂಡುರಾವ್ ಹೇಳಿಕೆ ನೀಡಿದರು.

Ad Widget ... ..

ಕೊವೀಡ್‌ ಗೆ ಸಂಬಂಧಿಸಿದಂತೆ ಅಗತ್ಯವಿರುವ ಬೆಡ್‌, ಆಕ್ಸಿಜನ್‌, ವೆಂಟಿ ಲೇಟರ್, ಪಿಪಿ ಕಿಟ್‌, ಮಾಸ್ಕ್‌ ರೆಡಿಮಾಡಲಾಗಿದೆ. ಕೇರಳ ಗಡಿಗೆ ಹೊಂದಿಕೊಂಡಿರುವ ಜಿಲ್ಲೆಗಳಲ್ಲಿ ಕಟ್ಟೆಚ್ಚರ ಹಾಗೂ ಕೇರಳ ಗಡಿಗೆ ಹೊಂದಿಕೊಂಡಂತೆ ಇರುವ ಸ್ಥಳಗಳಲ್ಲಿ ನಿಗಾ ತಪಾಸಣೆ ಮಾಡಲಾಗುವುದು. ಹೆಚ್ಚು ಟೆಸ್ಟಿಂಗ್‌ ಮಾಡಲು ಆರೋಗ್ಯ ಇಲಾಖೆಗೆ ಆದೇಶ ನೀಡಲಾಗುವುದು. ಹೆಚ್ಚು ಪಾಸಿಟಿವ್‌ ಕೇಸ್‌ ಬಂದರೆ ನಿರ್ಬಂಧದ ಬಗ್ಗೆ ಯೋಚನೆ ಮಾಡಲಾಗುವುದು. ರಾಜ್ಯ ಸರಕಾರ ಕೂಡ ಶೀಘ್ರದಲ್ಲೇ ಈ ಸಂಬಂಧ ಸಭೆ ನಡೆಸಿ ಅಗತ್ಯ ಮಾರ್ಗಸೂಚಿ ಹೊರಡಿಸಲಿದೆ ಎಂದು ಹೇಳಿದರು.

Ad Widget

Leave a Comment

Your email address will not be published. Required fields are marked *