ಸಮಗ್ರ ನ್ಯೂಸ್: ಭ್ರೂಣಹತ್ಯೆ ಪ್ರಕರಣಗಳು ದಿನದಿಂದ ದಿನಕ್ಕೆ ಹೆಚ್ಚಾಗುತ್ತಿದ್ದು, ಭ್ರೂಣಹತ್ಯೆ ಬಗ್ಗೆ ಸುಳಿವು ನೀಡಿದವರಿಗೆ ಒಂದು ಲಕ್ಷ ರೂಪಾಯಿ ನಗದು ಬಹುಮಾನ ನೀಡಲಾಗುವುದು ಹಾಗೂ ಮಾಹಿತಿ ನೀಡಿದವರ ಹೆಸರನ್ನು ಗೌಪ್ಯವಾಗಿ ಇಡಲಾಗುವುದು ಎಂದು ಆರೋಗ್ಯ ಇಲಾಖೆ ತಿಳಿಸಿದೆ.
ಭ್ರೂಣಹತ್ಯೆ ಬುಡಸಮೇತ ಕಿತ್ತುಹಾಕಲು ಆರೋಗ್ಯ ಇಲಾಖೆ ಎಲ್ಲಾ ರೀತಿಯ ಪ್ರಯತ್ನವನ್ನೂ ಮಾಡುತ್ತಿದೆ. ಭ್ರೂಣ ಹತ್ಯೆ, ಭ್ರೂಣಲಿಂಗ ಪತ್ತೆ ಬಗ್ಗೆ ಸುಳಿವು ಸಿಕ್ಕಾಕ್ಷಣ ಆರೋಗ್ಯ ಇಲಾಖೆಗೆ ಮಾಹಿತಿ ನೀಡಬೇಕು. ನಂತರ ಮಾಹಿತಿ ನೀಡಿದವರಿಗೆ ಒಂದು ಲಕ್ಷ ರೂಪಾಯಿ ಬಹುಮಾನ ನೀಡಲಾಗುತ್ತದೆ ಎಂದು ತಿಳಿಸಲಾಗಿದೆ.