Ad Widget .

ಕೇರಳದಲ್ಲಿ ಕೊರೊನಾ ರಣಕೇಕೆ| ರಾಜ್ಯದಲ್ಲಿ ಹೈ ಅಲರ್ಟ್| 60 ವರ್ಷ ಮೇಲ್ಪಟ್ಟವರಿಗೆ ಮಾಸ್ಕ್ ಕಡ್ಡಾಯಗೊಳಿಸಿದ ಆರೋಗ್ಯ ಇಲಾಖೆ

ಸಮಗ್ರ ನ್ಯೂಸ್: ರಾಜ್ಯದಲ್ಲಿ ಕೊರೊನಾ ರೂಪಾಂತರಿ ತಳಿ ಕಂಡುಬಂದಿರುವ ಹಿನ್ನೆಲೆಯಲ್ಲಿ 60 ವರ್ಷದ ಮೇಲ್ಪಟ್ಟವರಿಗೆ ಮಾಸ್ಕ್ ಕಡ್ಡಾಯಗೊಳಿಸಲಾಗಿದೆ ಎಂದು ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ಹೇಳಿದ್ದಾರೆ.‌

Ad Widget . Ad Widget .

ಕೊಡಗಿನ ಕುಶಾಲನಗರದಲ್ಲಿ ಮಾಧ್ಯಮದವರಿಗೆ ಪ್ರತಿಕ್ರಿಯಿಸಿದ ಅವರು, ಕೋವಿಡ್ ವಿಚಾರವಾಗಿ ಇಲಾಖೆಯಿಂದ ಇಂದು(ಡಿ.18) ಮಾರ್ಗಸೂಚಿ ಹೊರಡಿಸಲಾಗುವುದು ಎಂದು ತಿಳಿಸಿದರು.‌

Ad Widget . Ad Widget .

ಕೊರೋನಾ ರೂಪಾಂತರಿ ಬಗ್ಗೆ ಯಾರೂ ಆತಂಕಪಡಬೇಕಿಲ್ಲ. ಮುನ್ನೆಚ್ಚರಿಕೆ ಕ್ರಮಗಳನ್ನು ತೆಗೆದುಕೊಳ್ಳುವ ನಿಟ್ಟಿನಲ್ಲಿ ಈಗಾಗಲೇ ನಾನು ಒಂದು ಸುತ್ತಿನ ಸಭೆಯನ್ನು ಆರೋಗ್ಯ ಇಲಾಖೆ ಅಧಿಕಾರಿಗಳ ಜೊತೆ ನಡೆಸಿದ್ದೇನೆ. ಅಲ್ಲದೇ ಡಾ. ರವಿ ಅವರ ನೇತೃತ್ವದ ತಾಂತ್ರಿಕ ಸಲಹಾ ಸಮಿತಿ ಕೂಡಾ ನಿನ್ನಯೇ ಸಭೆ ನಡೆಸಿ ಕೆಲವು ಸಲಹೆಗಳನ್ನು ನೀಡಿದ್ದಾರೆ. 60 ವರ್ಷ ಮೇಲ್ಪಟ್ಟವರು ಹಾಗೂ ಹೃದಯ ಸಂಬಂಧಿ ಕಾಯಿಲೆ ಹೊಂದಿದವರು, ಉಸಿರಾಟದ ಸಮಸ್ಯೆ ಇರುವವರಿಗೆ ಮಾಸ್ಕ್ ಕಡ್ಡಾಯಗೊಳಿಸುವಂತೆ ಸಮಿತಿಯವರು ಸಲಹೆ ನೀಡಿದ್ದಾರೆ. ಸಮಿತಿಯ ಸಲಹೆಗಳನ್ನ ಆಧರಿಸಿ ಆರೋಗ್ಯ ಇಲಾಖೆಯಿಂದ ಇಂದು ಮಾರ್ಗಸೂಚಿ ಹೊರಡಿಸಲಾಗುವುದು ಎಂದು ಸಚಿವ ದಿನೇಶ್ ಗುಂಡೂರಾವ್ ಹೇಳಿದರು.

ಕೊರೊನ ರುಪಾಂತರ ತಡೆಯ ಬಗ್ಗೆ ಯಾರೂ ಕೂಡ ಭಯಪಡಬೇಕಿಲ್ಲ. 60 ವರ್ಷ ಮೇಲ್ಪಟ್ಟ ವೃದ್ಧರು ಎಲ್ಲರೂ ತಪಾಸಣೆ ಮಾಡಿಕೊಳ್ಳಬೇಕು. ಕರೋನ ಲಕ್ಷಣ ಇದ್ದರೆ ಕಡ್ಡಾಯವಾಗಿ ಮಾಸ್ಕ ಧರಿಸಿ. ಅಗತ್ಯ ಕ್ರಮ ಕೈಗೊಳ್ಳುವ ಕುರಿತು ಸಭೆ ಮಾಡಿ ಚರ್ಚೆ ಮಾಡಿದ್ದೇವೆ ಎಂದರು.

ಕೇಂದ್ರ ಸರ್ಕಾರ ಹಾಗೂ ತಜ್ಞರ ಜೊತೆ ಕೂಡ ಚರ್ಚೆ ಮಾಡಲಾಗಿದೆ. ಹೆಚ್ಚು ಟೆಸ್ಟಿಂಗ್ ಮಾಡುವಂತೆ ಆರೋಗ್ಯ ಇಲಾಖೆಗೆ ಸೂಚಿಸಲಾಗಿದೆ. ಅಗತ್ಯವಿರುವ ಬೆಡ್ ಪಿಪಿಇ ಕಿಟ್ ಆಕ್ಸಿಜನ್ ಗಳನ್ನು ಸಿದ್ಧತೆ ಮಾಡಿಕೊಳ್ಳಲಾಗಿದೆ. ಕೇರಳ ಗಡಿ ಜಿಲ್ಲೆಯಲ್ಲಿ ಹೆಚ್ಚು ಮುನ್ನೆಚ್ಚರಿಕೆ ವಹಿಸಲು ಸೂಚಿಸೆಲಾಗಿದೆ ಎಂದು ತಿಳಿಸಿದರು.

ಶೀತ, ಜ್ವರ,ಕೆಮ್ಮು ಇರುವವರು ಕರುನಾಟೆಸ್ಟ್ ಮಾಡಿಸಿಕೊಳ್ಳಬೇಕು ಹೆಚ್ಚು ಪಾಸಿಟಿವ್ ಬಂದರೆ ಅಷ್ಟೇ ನಿಷೇಧ. ಇದು ಅದು ಮಾಡಬಾರದು ಸದ್ಯಕ್ಕೆ ಅಂತಹ ಪರಿಸ್ಥಿತಿಯಿಲ್ಲ. ಯಾರೂ ಆತಂಕ ಪಡುವ ಅಗತ್ಯವಿಲ್ಲ ಎಂದು ಕುಶಾಲನಗರದಲ್ಲಿ ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ಹೇಳಿದರು.

Leave a Comment

Your email address will not be published. Required fields are marked *