ಶಾಲೆಯ ಮಕ್ಕಳನ್ನು ಟಾಯ್ಲೆಟ್ ಗುಂಡಿಗೆ ಇಳಿಸಿ ಸ್ಚಚ್ಛತೆ… ಪ್ರಾಂಶುಪಾಲೆ ಸೇರಿ ಇಬ್ಬರು ಅಮಾನತು

ಸಮಗ್ರ ನ್ಯೂಸ್: ಕೋಲಾರ ಜಿಲ್ಲೆಯ ಮಾಲೂರು ತಾಲೂಕಿನ ಯಲುವಳ್ಳಿ ಬಳಿಯ ಮೊರಾರ್ಜಿ ವಸತಿ ಶಾಲೆಯಲ್ಲಿ ವಿದ್ಯಾರ್ಥಿಗಳಿಂದ ಶೌಚಾಲಯದ ಗುಂಡಿ ಸ್ವಚ್ಛ ಮಾಡಿಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಶಾಲೆಯ ಪ್ರಿನ್ಸಿಪಾಲ್ ಸೇರಿ ಇಬ್ಬರನ್ನು ಮಾಸ್ತಿ ಪೊಲೀಸ್‌ ಠಾಣೆಯ ಪೊಲೀಸರು ಬಂಧಿಸಿದ್ದಾರೆ. ಪ್ರಾಂಶುಪಾಲೆ ಭಾರತಮ್ಮ, ಸಹ ಶಿಕ್ಷಕ ಮುನಿಯಪ್ಪರನ್ನು ಬಂಧಿಸಿದ್ದಾರೆ.
ಸಮಾಜ ಕಲ್ಯಾಣ ಇಲಾಖೆ ಜಂಟಿ ನಿರ್ದೇಶಕ ಶ್ರೀನಿವಾಸ್ ದೂರು ಹಿನ್ನೆಲೆ ಮಲಹೊರುವ ಪದ್ಧತಿ ನಿಯಂತ್ರಣ ಕಾಯ್ದೆ, ಅಟ್ರಾಸಿಟಿ ಕಾಯ್ದೆಯಡಿ ನಾಲ್ವರ ವಿರುದ್ಧ ಎಫ್‌ಐಆರ್ ದಾಖಲಾಗಿತ್ತು.

. Ad Widget . Ad Widget

ಕಳೆದ ಹಲವು ದಿನಗಳಿಂದ ಮಕ್ಕಳಿಗೆ ವಿವಿಧ ರೀತಿಯಲ್ಲಿ ಕಿರುಕುಳ ಕೂಡ ನೀಡಲಾಗುತ್ತಿದೆ ಅಂತಾ ಪ್ರಾಂಶುಪಾಲೆ ಭಾರತಮ್ಮ, ಶಿಕ್ಷಕ ಅಭಿಷೇಕ್, ಹಾಗೂ ವಾರ್ಡನ್ ಮಂಜುನಾಥ್ ಸೇರಿ ಕೆಲವು ಶಿಕ್ಷಕರ ವಿರುದ್ಧ ಆರೋಪ ಕೇಳಿಬಂದಿತ್ತು. ಮಕ್ಕಳಿಗೆ ಥಳಿಸುತ್ತಿರೋ, ಶಿಕ್ಷೆ ಕೊಡುತ್ತಿರುವ ವಿಡಿಯೋಗಳು ವೈರಲ್ ಆಗಿತ್ತು.

. Ad Widget . . Ad Widget . Ad Widget

ಇದೀಗ ಈ ವಸತಿ ಶಾಲೆಯಲ್ಲಿ ಮಕ್ಕಳಿಗೆ ಕಿರುಕುಳ ಆರೋಪದ ಜೊತೆಗೆ ಮತ್ತೊಂದು ಗಂಭೀರ ಆರೋಪವೂ ಕೇಳಿಬಂದಿದೆ. ಹೆಣ್ಣು ಮಕ್ಕಳು ಬಟ್ಟೆ ಬದಲಿಸುವ ಫೋಟೋ ಕೂಡ ತೆಗೆಯಲಾಗ್ತಿತ್ತು ಅಂತಾ ಪೋಷಕರು ಆರೋಪಿಸಿದ್ದಾರೆ.

Leave a Comment

Your email address will not be published. Required fields are marked *