Ad Widget .

ದೇಶದಲ್ಲಿ ರೂಪಾಂತರಿ ಕೋವಿಡ್ ಹೆಚ್ಚಳ ಹಿನ್ನಲೆ| ಕೇಂದ್ರದಿಂದ ಮಾರ್ಗಸೂಚಿ ಪ್ರಕಟ

ಸಮಗ್ರ ನ್ಯೂಸ್: ಭಾರತದಲ್ಲಿ ಕೋವಿಡ್ ಪ್ರಕರಣ ಸಂಖ್ಯೆ ಏರಿಕೆಯಾಗುತ್ತಿದೆ. ಅಮೆರಿಕ ಸೇರಿದಂತೆ ಕೆಲ ರಾಷ್ಟ್ರಗಳಲ್ಲಿ ಈಗಾಗಲೇ ಕೋವಿಡ್ ಅಲೆ ಭೀತಿ ಎದುರಾಗಿದೆ. ಭಾರತದಲ್ಲಿ ಪ್ರಕರಣ ಸಂಖ್ಯೆ ಏರಿಕೆಯಾಗುತ್ತಿದ್ದರೂ ಆತಂಕದ ಪರಿಸ್ಥಿತಿ ಇಲ್ಲ. ಆದರೆ ಕೇರಳದಲ್ಲಿ ಕೋವಿಡ್ ಹೊಸ ತಳಿ JN.1 ಪತ್ತೆಯಾಗಿದೆ.

Ad Widget . Ad Widget .

ಇಷ್ಟೇ ಅಲ್ಲ ಕೋವಿಡ್‌ನಿಂದ ಸಾವು ಕೂಡ ಸಂಭವಿಸಿದೆ. ಇತರ ರಾಜ್ಯಗಳಲ್ಲೂ ಕೋವಿಡ್ ಸಂಖ್ಯೆ ಏರಿಕೆಯತ್ತ ಸಾಗುತ್ತಿದೆ. ಇದರ ಬೆನ್ನಲ್ಲೇ ಕೇಂದ್ರ ಆರೋಗ್ಯ ಇಲಾಖೆ ಮಾರ್ಗಸೂಚಿ ಪ್ರಕಟಿಸಿದೆ. ಕೋವಿಡ್ ಈ ಹಿಂದಿನ ಅಲೆಗಳಲ್ಲಿ ಕೇಂದ್ರ ಸರ್ಕಾರ ಕಟ್ಟುನಿಟ್ಟಿನ ಮಾರ್ಗಸೂಚಿ ಪ್ರಕಟಿಸಿತ್ತು. ಇದೀಗ ಪರಿಸ್ಥಿತಿಗೆ ತಕ್ಕಂತೆ ಮಾರ್ಗಸೂಚಿ ಪ್ರಕಟಿಸಿದೆ.

Ad Widget . Ad Widget .

ಎಲ್ಲಾ ರಾಜ್ಯ ಹಾಗೂ ಕೇಂದ್ರಾಡಳಿತದಲ್ಲಿರುವ ಸರ್ಕಾರಗಳಿಗೆ ಕೋವಿಡ್ ಮಾರ್ಗಸೂಚಿ ಪಾಲಿಸಲು ಸೂಚನೆ ನೀಡಿದೆ. ಮಾಸ್ಕ್, ಸಾಮಾಜಿಕ ಅಂತರ ಸೇರಿದಂತೆ ಈ ಹಿಂದಿನ ಸೂಚನೆಗಳನ್ನು ಈ ಬಾರಿಯೂ ನೀಡಲಾಗಿದೆ. ಪ್ರಮುಖವಾಗಿ ಎಚ್ಚರವಹಿಸುವಂತೆ ಸೂಚಿಸಲಾಗಿದೆ. ಕೋವಿಡ್ ವೈರಸ್‌ನಿಂದ ಯಾರೂ ಆತಂಕಪಡಬೇಕಾಗಿಲ್ಲ. ಆದರೆ ಮುಂಜಾಗ್ರತೆ ವಹಿಸುವ ಅಗತ್ಯತೆ ಇದೆ ಎಂದು ಕೇಂದ್ರ ತನ್ನ ಮಾರ್ಗಸೂಚಿಯಲ್ಲಿ ಹೇಳಿದೆ.

ಕರ್ನಾಟಕದಲ್ಲಿ ರಾಜ್ಯ ಸರ್ಕಾರ ಈಗಾಗಲೇ ಕೋವಿಡ್ ಮಾರ್ಗಸೂಚಿ ಪ್ರಕಟಿಸಲಾಗಿದೆ. 60 ವರ್ಷ ಮೇಲ್ಪಟ್ಟವರಿಗೆ ಮಾಸ್ಕ್ ಕಡ್ಡಾಯ ಮಾಡಲಾಗಿದೆ. ಕೋವಿಡ್ ಪರೀಕ್ಷೆ ಸೇರಿದಂತೆ ಹಲವು ಕ್ರಮಗಳನ್ನು ಜಾರಿಗೊಲಿಸಾಗಿದೆ. ಕೇರಳದಲ್ಲಿ ಕೋವಿಡ್ ಸೋಂಕು ಹೆಚ್ಚಾಗುತ್ತಿರುವ ಕಾರಣ ಗಡಿ ನಿರ್ಬಂಧನೆ ಅವಶ್ಯಕತೆ ಇಲ್ಲ ಎಂದು ರಾಜ್ಯ ಸರ್ಕಾರ ಸ್ಪಷ್ಟಪಡಿಸಿದೆ. ಆದರೆ ಕರ್ನಾಟಕದಲ್ಲಿ ಕೋವಿಡ್ ಪರೀಕ್ಷೆಗಳ ಹೆಚ್ಚಿಸಲು ಸೂಚಿಸಲಾಗಿದೆ. ಇನ್ನು ಸೋಂಕು ಲಕ್ಷಣ ಇರುವವರಿಗೆ ಸರ್ಕಾರಿ ಆಸ್ಪತ್ರೆಗಳಲ್ಲಿ ಕಡ್ಡಾಯ ಪರೀಕ್ಷೆಗೆ ಸೂಚಿಸಲಾಗಿದೆ.

ಆಸ್ಪತ್ರೆಗಳಲ್ಲಿ ಪರೀಕ್ಷೆಗಳನ್ನು ಹೆಚ್ಚು ಮಾಡುವ ಮೂಲಕ ರಾಜ್ಯದಲ್ಲಿನ ಕೋವಿಡ್ ಸ್ಥಿತಿಗತಿ ಪರಿಶೀಲನೆಗೆ ಸರ್ಕಾರ ಮುಂದಾಗಿದೆ.. ಒಂದು ವೇಳೆ ಸೋಂಕು ಪ್ರಕರಣಗಳು ಹೆಚ್ಚಾಗುತ್ತಿರುವುದು ತಿಳಿದುಬಂದರೆ, ಕಟ್ಟುನಿಟ್ಟಿನ ನಿರ್ಬಂಧ ಕ್ರಮಗಳನ್ನು ಕೈಗೊಳ್ಳುವ ಕುರಿತು ಸಭೆ ನಡಸಲು ರಾಜ್ಯ ಸರ್ಕಾರ ಮುಂದಾಗಿದೆ.

Leave a Comment

Your email address will not be published. Required fields are marked *