ಸಮಗ್ರ ನ್ಯೂಸ್: ಜ್ಞಾನವಾಪಿ ಮಸೀದಿ ಇರುವ ಸ್ಥಳದಲ್ಲಿ ದೇವಾಲಯವನ್ನು ಮರುಸ್ಥಾಪಿಸುವ ಬಗ್ಗೆ ಹಿಂದೂ ಸಮುದಾಯ ಸಲ್ಲಿಸಿದ್ದ ಅರ್ಜಿಯನ್ನು ಹಾಗೂ ಬಾಕಿ ಉಳಿದಿರುವ ಸಿವಿಲ್ ಮೊಕದ್ದಮೆಯ ನಿರ್ವಹಣೆಯನ್ನು ಪ್ರಶ್ನಿಸಿ ಅಂಜುಮ ತೇಜಾಮಿಯಾ ಮಸೀದಿ ಹಾಗೂ ಯುಪಿ ಸುನ್ನಿ ಸೆಂಟ್ರಲ್ ವಕ್ಸ್ ಬೋರ್ಡ್ ಸಲ್ಲಿಸಿದ್ದ ಅರ್ಜಿಗಳನ್ನು ಅಲಹಾಬಾದ್ ಕೋರ್ಟ್‍ನಲ್ಲಿ ವಜಾಗೊಳಿಸಲಾಗಿದೆ.
ಜ್ಞಾನವಾಪಿ ಮಸೀದಿಯ ಸಮಗ್ರ ಸಮೀಕ್ಷೆಯನ್ನು ನಡೆಸುವಂತೆ ವಾರಣಾಸಿ ಜಿಲ್ಲಾ ಕೋರ್ಟ್ ಸೂಚಿಸಿದ್ದು, ಇದನ್ನು ಪ್ರಶ್ನಿಸಿ ಅರ್ಜಿ ಸಲ್ಲಿಸಲಾಗಿತ್ತು. ಸದ್ಯ ಅಲಹಾಬಾದ್ ಕೋರ್ಟ್ ಅರ್ಜಿ ವಜಾ ಮಾಡಿದ್ದು, ಇನ್ನು ಆರು ತಿಂಗಳಿನಲ್ಲಿ ವಿಚಾರಣೆ ಪೂರ್ಣಗೊಳಿಸುವಂತೆ ಜಿಲ್ಲಾ ಕೋರ್ಟ್‍ಗೆ ಸೂಚನೆ ನೀಡಿದೆ.