Ad Widget .

ಮಂಗಳೂರು – ವಿಜಯಪುರ ರೈಲು ಸೇವೆ ಭಾಗಶಃ ರದ್ದು| ಇಲ್ಲಿದೆ ಫುಲ್ ಡೀಟೈಲ್ಸ್

ಸಮಗ್ರ ನ್ಯೂಸ್: ನೈಋತ್ಯ ರೈಲ್ವೇಯ ಹುಬ್ಬಳ್ಳಿ ವಿಭಾಗದ ಗುಳೇದಗುಡ್ಡ ಮತ್ತು ಬಾಗಲಕೋಟೆ ನಡುವೆ ವಿವಿಧ ಕಾಮಗಾರಿಗಳ ಹಿನ್ನೆಲೆಯಲ್ಲಿ ಮಂಗಳೂರು ಜಂಕ್ಷನ್‌- ವಿಜಯಪುರ- ಮಂಗಳೂರು ಜಂಕ್ಷನ್‌ ಎಕ್ಸ್‌ಪ್ರೆಸ್‌ ರೈಲಿನ ಸಂಚಾರದಲ್ಲಿ ವ್ಯತ್ಯಯವಾಗಲಿದೆ.

Ad Widget . Ad Widget .

ಮಂಗಳೂರು ಜಂಕ್ಷನ್‌ನಿಂದ ಮಧ್ಯಾಹ್ನ 2.50ಕ್ಕೆ ಹೊರಡುವ ನಂ. 07378 ಮಂಗಳೂರು ಜಂಕ್ಷನ್‌-ವಿಜಯಪುರ ಎಕ್ಸ್‌ಪ್ರೆಸ್‌ ವಿಶೇಷ ರೈಲು ಡಿ. 19-28ರ ವರೆಗೆ ಹುಬ್ಬಳ್ಳಿ ಜಂಕ್ಷನ್‌ ಮತ್ತು ವಿಜಯಪುರ ನಡುವೆ ಭಾಗಶಃ ರದ್ದಾಗಲಿದೆ.

Ad Widget . Ad Widget .

ರೈಲು ವಿಜಯಪುರದ ಬದಲು ಹುಬ್ಬಳ್ಳಿ ಜಂಕ್ಷನ್‌ನಲ್ಲಿ ಸಂಚಾರ ಕೊನೆಗೊಳಿಸಲಿದೆ. ನಂ. 07377 ವಿಜಯ ಪುರ- ಮಂಗಳೂರು ಜಂಕ್ಷನ್‌ ಎಕ್ಸ್‌ಪ್ರೆಸ್‌ ವಿಶೇಷ ರೈಲು ಸಂಚಾರ ಡಿ.19ರಿಂದ 28ರ ವರೆಗೆ ವಿಜಯಪುರ ಮತ್ತು ಹುಬ್ಬಳ್ಳಿ ಜಂಕ್ಷನ್‌ ನಡುವೆ ಭಾಗಶಃ ರದ್ದಾಗಲಿದ್ದು, ರೈಲು ತಡರಾತ್ರಿ 12.05ಕ್ಕೆ ಹುಬ್ಬಳ್ಳಿ ಜಂಕ್ಷನ್‌ನಿಂದ ಪ್ರಯಾಣ ಆರಂಭಿಸಲಿದೆ ಎಂದು ಪ್ರಕಟನೆ ತಿಳಿಸಿದೆ.

Leave a Comment

Your email address will not be published. Required fields are marked *