Ad Widget .

ರಾಜ್ಯದಲ್ಲಿ ಇಂದು 22 ಮಂದಿಗೆ ಕೋವಿಡ್ ಪಾಸಿಟಿವ್| ಸೋಂಕಿತರಲ್ಲಿ ಇಬ್ಬರು ಸಾವು

ಸಮಗ್ರ ನ್ಯೂಸ್: ರಾಜ್ಯದಲ್ಲಿ ಕೋವಿಡ್ ( Covid19 ) ಆರ್ಭಟ ಶುರುವಾಗಿದೆ. ವಿವಿಧ ಜಿಲ್ಲೆಗಳಲ್ಲಿ ಇಂದು ಒಂದೇ ದಿನ 22 ಮಂದಿಗೆ ಕೊರೋನಾ ಪಾಸಿಟಿವ್ ಎಂಬುದಾಗಿ ದೃಢಪಟ್ಟಿದೆ. ಅಲ್ಲದೇ ಸೋಂಕಿತರಲ್ಲಿ ಇಬ್ಬರು ಚಿಕಿತ್ಸೆ ಫಲಿಸದೇ ಸಾವನ್ನಪ್ಪಿದ್ದಾರೆ.

Ad Widget . Ad Widget .

ಈ ಕುರಿತಂತೆ ರಾಜ್ಯ ಆರೋಗ್ಯ ಇಲಾಖೆಯಿಂದ ( Karnataka Health Department ) ಮಾಹಿತಿ ನೀಡಲಾಗಿದ್ದು, ಬೆಂಗಳೂರು ನಗರದಲ್ಲಿ 359 ಮಂದಿಯನ್ನು ಪರೀಕ್ಷೆಗೆ ಒಳಪಡಿಸಲಾಗಿತ್ತು.

Ad Widget . Ad Widget .

ಇವರಲ್ಲಿ 19 ಜನರಿಗೆ ಕೊರೋನಾ ಪಾಸಿಟಿವ್ ಎಂಬುದು ವರದಿಯಲ್ಲಿ ದೃಢಪಟ್ಟಿದೆ ಎಂದಿದೆ. ಚಿಕ್ಕಬಳ್ಳಾಪುರದಲ್ಲಿ 94 ಮಂದಿಯನ್ನು ಪರೀಕ್ಷೆ ನಡೆಸಲಾಗಿದೆ. ಧಾರವಾಡದಲ್ಲಿ ಐವರನ್ನು ಪರೀಕ್ಷೆಗೆ ಒಳಪಡಿಸಲಾಗಿದ್ದು ಯಾರಿಗೂ ಸೋಂಕು ದೃಢಪಟ್ಟಿಲ್ಲ. ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಇಬ್ಬರನ್ನು ಪರೀಕ್ಷೆಗೆ ಒಳಪಡಿಸಲಾಗಿತ್ತು ಅವರಲ್ಲಿ ಒಬ್ಬರಿಗೆ ಕೋವಿಡ್ ಸೋಂಕು ದೃಢಪಟ್ಟಿದೆ ಎಂದು ತಿಳಿಸಿದೆ.

ಬಳ್ಳಾರಿಯಲ್ಲಿ ಪರೀಕ್ಷೆಗೆ ಒಳಗಾದಂತ ಇಬ್ಬರಿಗೂ ಕೋವಿಡ್ ಪಾಸಿಟಿವ್ ಎಂದು ವರದಿಯಲ್ಲಿ ತಿಳಿದು ಬಂದಿದೆ. ಹೀಗಾಗಿ ಇಂದು ರಾಜ್ಯಾದ್ಯಂತ 22 ಮಂದಿಗೆ ಕೊರೋನಾ ಪಾಸಿಟಿವ್ ಎಂಬುದಾಗಿ ಪರೀಕ್ಷೆಯಲ್ಲಿ ದೃಢಪಟ್ಟಿದೆ ಎಂದು ಮಾಹಿತಿ ನೀಡಿದೆ.

Leave a Comment

Your email address will not be published. Required fields are marked *