Ad Widget .

ಹೃದಯಾಘಾತದಿಂದ ಏಳನೇ ತರಗತಿ ವಿದ್ಯಾರ್ಥಿನಿ ಸಾವು

ಸಮಗ್ರ ನ್ಯೂಸ್: ಏಳನೇ ತರಗತಿ ವಿದ್ಯಾರ್ಥಿನಿ ಹೃದಯಾಘಾತದಿಂದ ಸಾವನ್ನಪ್ಪಿದ ಘಟನೆ ಚಿಕ್ಕಮಗಳೂರು ಜಿಲ್ಲೆಯ ಮೂಡಿಗೆರೆ ತಾಲೂಕಿನ ಕೆಸವಳಲು ಜೋಗಣ್ಣನಕೆರೆ ಗ್ರಾಮದಲ್ಲಿ ನಡೆದಿದೆ.

Ad Widget . Ad Widget .

13 ವರ್ಷದ ಸೃಷ್ಟಿ ಮೃತ ವಿದ್ಯಾರ್ಥಿನಿ. ಇಂದು ಬೆಳಗ್ಗೆ ಶಾಲೆಗೆ ತೆರಳುವಾಗ ಸೃಷ್ಟಿ ಕುಸಿದು ಬಿದ್ದಿದ್ದಾಳೆ. ಆಸ್ಪತ್ರೆಗೆ ಸಾಗಿಸುವ ಮಾರ್ಗ ಮಧ್ಯೆಯೇ ಸೃಷ್ಟಿಯ ಪ್ರಾಣಪಕ್ಷಿ ಹಾರಿ ಹೋಗಿದೆ. ಹೃದಯಾಘಾತದಿಂದಲೇ ಸೃಷ್ಟಿ ಮೃತಪಟ್ಟಿದ್ದಾಳೆ ಎಂದು ಮೂಡಿಗೆರೆ ಎಂಜಿಎಂ ಸರ್ಕಾರಿ ವೈದ್ಯರು ಮಾಹಿತಿ ನೀಡಿದ್ದಾರೆ.

Ad Widget . Ad Widget .

ಮೃತ ವಿದ್ಯಾರ್ಥಿನಿ ದಾರದಹಳ್ಳಿ ಪ್ರಾಥಮಿಕ ಶಾಲೆಯಲ್ಲಿ ವ್ಯಾಸಂಗ ಮಾಡುತ್ತಿದ್ದಳು. ಮಗಳ ಸಾವಿನಿಂದ ಕುಟುಂಬ ಆಘಾತದಲ್ಲಿದ್ದು ಕುಟುಂಬಸ್ಥರ ಆಕ್ರಂದನ ಮುಗಿಲು ಮುಟ್ಟಿದೆ. ಬೆಳಗ್ಗೆ ಶಾಲೆಗೆ ಹೋಗುವಾಗ ಚೆನ್ನಾಗಿಯೇ ಇದ್ದಳು. ಆದ್ರೆ ಮಾರ್ಗ ಮಧ್ಯೆ ಹೀಗೆ ಆಗಿದೆ ಎಂದು ಸೃಷ್ಟಿ ಪೋಷಕರು ಕಣ್ಣೀರು ಹಾಕುತ್ತಿದ್ದಾರೆ.

Leave a Comment

Your email address will not be published. Required fields are marked *