ಸಮಗ್ರ ನ್ಯೂಸ್: ಎಲ್ಲರೂ ಕಡ್ಡಾಯವಾಗಿ ಮಾಸ್ಕ್ ಹಾಕುವ ಪರಿಸ್ಥಿತಿ ಬಂದಿಲ್ಲ. ಕಡ್ಡಾಯವಾಗಿ ಮಾಸ್ಕ್ ಹಾಕಿ ಎಂದು ಹೇಳುತ್ತಿಲ್ಲ. ಸಲಹೆ ಅಷ್ಟೇ. ಇನ್ನು ಸೂಕ್ತ ಕೋವಿಡ್ ಚಿಕಿತ್ಸೆ ನೀಡಲು ಸೂಚಿಸಿದ್ದೇನೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ.
ಕರ್ನಾಟಕದಲ್ಲಿ ಕೋವಿಡ್ ಕುರಿತು ಗೃಹ ಕಚೇರಿ ಕಾವೇರಿಯಲ್ಲಿ ಸಿಎಂ ಸಿದ್ದರಾಮಯ್ಯ ಮಹತ್ವದ ಸಭೆ ನಡೆಸಿದರು. ಬಳಿಕ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಸಿಎಂ, ಈಗಾಗಲೇ ಆರೋಗ್ಯ ಸಚಿವರು ಸಭೆ ಮಾಡಿದ್ದಾರೆ. Tac ಜೊತೆ ಚರ್ಚೆ ಮಾಡಿ ಅವರ ಸಲಹೆ ತೆಗೆದುಕೊಂಡಿದ್ದೇವೆ. ಯಾವುದೇ ಕಾರಣಕ್ಕೂ ಹಿಂದೆ ಮಾಡಿದ ತಪ್ಪುಗಳು ಮರುಕಳಿಸಬಾರದು ಎಂದು ಅಧಿಕಾರಿಗೆ ಸೂಚನೆ ನೀಡಿದ್ದೇನೆ. ಆಕ್ಸಿಜನ್, ಬೆಡ್ ಸಮಸ್ಯೆ ಬರಬಾರದು ಎಂದು ಹೇಳಿದ್ದೇನೆ. ಬೇರೆ ಖಾಯಿಲೆಗಳನ್ನ ಗಂಭೀರವಾಗಿ ಪರಿಗಣಿಸಿ ಚಿಕಿತ್ಸೆಗೆ ಸೂಚಿಸಿದ್ದೇನೆ ಎಂದರು.
ಇನ್ನು ಇದೇ ವೇಳೆ ಕ್ರಿಸ್ಮಸ್, ಹೊಸ ವರ್ಷಾಚರಣೆಗೆ ಯಾವುದೇ ನಿರ್ಬಂಧವಿಲ್ಲ ಎಂದು ಸ್ಪಷ್ಟಪಡಿಸಿದರು. 60 ವರ್ಷ ಮೇಲ್ಪಟ್ಟವರು ಕಡ್ಡಾಯವಾಗಿ ಮಾಸ್ಕ್ ಹಾಕಬೇಕು. ಹಾಗೇ ಇನ್ನುಳಿದವರೂ ಸಹ ಜನಸಂದಣಿ ಇರುವ ಕಡೆ ಎಲ್ಲರೂ ಮಾಸ್ಕ್ ಹಾಕಿಕೊಳ್ಳಬೇಕು.
RTPCR 3,500 ಸೇರಿ ಒಟ್ಟು 5 ಸಾವಿರ ಟೆಸ್ಟ್ ನಿತ್ಯ ಆಗಲಿದ್ದು, ಗಡಿ ಭಾಗದಲ್ಲಿ ಹೆಚ್ಚು ಟೆಸ್ಟಿಂಗ್ ಗೆ ಸೂಚಿಸಲಾಗಿದೆ. ಈ ಖಾಯಿಲೆಗೆ ಯಾರೂ ಭಯ, ಆತಂಕ ಪಡುವ ಅಗತ್ಯವಿಲ್ಲ. ಆದರೆ ಎಚ್ಚರಿಕೆಯಿಂದ ಇರಬೇಕು ಎಂದು ಹೇಳಿದರು.