Ad Widget .

ಅಮಾನತಾಗಿರುವ ಸಂಸದರು ಸಂಸತ್ತಿನ ಚೇಂಬರ್, ಲಾಬಿ ಹಾಗೂ ಗ್ಯಾಲರಿಗೆ ಪ್ರವೇಶಿಸುವಂತಿಲ್ಲ/ ಲೋಕಸಭಾ ಕಚೇರಿ ಆದೇಶ

ಸಮಗ್ರ ನ್ಯೂಸ್: ಸಂಸತ್ತಿನಿಂದ ಅಮಾನತಾಗಿರುವ ಸಂಸದರು ಸಂಸತ್ತಿನ ಚೇಂಬರ್, ಲಾಬಿ ಹಾಗೂ ಗ್ಯಾಲರಿಗೆ ಪ್ರವೇಶಿಸುವಂತಿಲ್ಲ ಎಂದು ಲೋಕಸಭಾ ಕಚೇರಿಯಿಂದ ಆದೇಶ ಹೊರಡಿಸಲಾಗಿದೆ. ಸಂಸತ್ ಭವನದಲ್ಲಿ ಉಂಟಾದ ಭದ್ರತಾ ಲೋಪ ಕುರಿತ ಚರ್ಚೆಗೆ ಒತ್ತಾಯಿಸಿ ಉಭಯ ಸದನಗಳಲ್ಲಿ ಅಶಿಸ್ತಿನ ವರ್ತನೆ ತೋರಿದ ಹಿನ್ನೆಲೆಯಲ್ಲಿ ಲೋಕಸಭೆ ಹಾಗೂ ರಾಜ್ಯಸಭೆಯಲ್ಲಿನ ವಿವಿಧ ಪಕ್ಷಗಳ ಸದಸ್ಯರನ್ನು ಅಮಾನತುಗೊಳಿಸಲಾಗಿತ್ತು.

Ad Widget . Ad Widget .

ಅಮಾನತುಗೊಂಡ ಎಲ್ಲಾ ಸಂಸದರಿಗೆ ಯಾವುದೇ ಸಂಸದೀಯ ಸಮಿತಿಯ ಸಭೆಗೆ ಹಾಜರಾಗಲು ಅವರಿಗೆ ಅವಕಾಶವಿರಲ್ಲ. ಸಂಸತ್ತಿನ ಮೊಗಸಾಲೆ, ಕೋಣೆ ಹಾಗೂ ಗ್ಯಾಲರಿಗೆ ಪ್ರವೇಶ ನಿಬರ್ಂಧಿಸಲಾಗಿದೆ. ಅಮಾನತು ಅವಧಿಯಲ್ಲಿ ಯಾವುದೇ ಸೂಚನೆಗಳನ್ನು ನೀಡುವಂತಿಲ್ಲ, ಸಮಿತಿಗಳಿಗೆ ನಡೆಯುವ ಯಾವುದೇ ಚುನಾವಣೆಯಲ್ಲಿ ಮತ ಚಲಾಯಿಸುವಂತಿಲ್ಲ. ಅಧಿವೇಶನದ ಉಳಿದ ಅವಧಿಗೆ ಅವರನ್ನು ಸದನದ ಸೇವೆಯಿಂದ ಅಮಾನತುಗೊಳಿಸಿದರೆ, ಅವರು ಅಮಾನತು ಅವಧಿಯಲ್ಲಿ ದೈನಂದಿನ ವೇತನದ ಭತ್ಯೆಗೂ ಅರ್ಹರಾಗಿರುವುದಿಲ್ಲ ಎಂದು ತಿಳಿಸಲಾಗಿದೆ

Ad Widget . Ad Widget .

Leave a Comment

Your email address will not be published. Required fields are marked *