Ad Widget .

ದತ್ತಪೀಠದಲ್ಲಿ ದತ್ತಜಯಂತಿಯ ಸಂಭ್ರಮ/ ಜಿಲ್ಲೆಯಾದ್ಯಂತ ಬಿಗಿ ಭದ್ರತೆ

ಸಮಗ್ರ ನ್ಯೂಸ್: ಇನಾಂ ದತ್ತಾತ್ರೇಯ ಬಾಬಾಬುಡನ್ ಗಿರಿಯ ದತ್ತಪೀಠದಲ್ಲಿ ಡಿ. 24, 25 ಮತ್ತು 26ರಂದು ನಡೆಯುವ ಸಂಭ್ರಮದ ದತ್ತ ಜಯಂತಿ ಕಾರ್ಯಕ್ರಮದ ಹಿನ್ನೆಲೆಯಲ್ಲಿ ಚಿಕ್ಕಮಗಳೂರಿನಲ್ಲಿ ಭದ್ರತೆಗೆ 4000ಕ್ಕೂ ಹೆಚ್ಚು ಪೆÇಲೀಸರ ನಿಯೋಜನೆ ಮಾಡಲಾಗಿದೆ ಎಂದು ಚಿಕ್ಕಮಗಳೂರು ಜಿಲ್ಲಾ ಎಸ್ಪಿ ವಿಕ್ರಂ ಅಮಟೆ ಮಾಹಿತಿ ನೀಡಿದ್ದಾರೆ.

. Ad Widget . . Ad Widget . Ad Widget Ad Widget . Ad Widget . Ad Widget . Ad Widget . Ad Widget . Ad Widget . Ad Widget .

ಜಿಲ್ಲೆಯಾದ್ಯಂತ 28 ಚೆಕ್ ಪೋಸ್ಟ್,, 300ಕ್ಕೂ ಅಧಿಕ ಸಿ.ಸಿ ಕ್ಯಾಮೆರಾ ಹಾಗೂ 50ಕ್ಕೂ ಅಧಿಕ ಬಾಡಿ ಕ್ಯಾಮೆರಾ ಅಳವಡಿಕೆ ಮಾಡಲಾಗಿದೆ. ಪ್ರತಿ ಚೆಕ್ ಪೋಸ್ಟ್ ಗೂ ವಿಶೇಷ ದಂಡಾಧಿಕಾರಿಗಳ ನೇಮಕ ಮಾಡಲಾಗಿದೆ. ಜಿಲ್ಲೆಯಾದ್ಯಂತ ಭದ್ರತೆಗಾಗಿ 4000 ಪೆÇಲೀಸರು, 7ಂ ಎಎಸ್‍ಪಿ 30 ಡಿವೈಎಸ್‍ಪಿ 30 ಇನ್ಸೆಕ್ಟರ್, ನೂರಾರು ಹೋಂಗಾರ್ಡ್,20 ಕೆಎಸ್‍ಆರ್‍ಪಿ ತುಕಡಿ ಸೇರಿದಂತೆ ಹಲವು ಸಿಬ್ಬಂದಿಗಳನ್ನು ನಿಯೋಜನೆ ಮಾಡಲಾಗಿದೆ. ಚಿಕ್ಕಮಗಳೂರು ಜಿಲ್ಲೆಯಾದ್ಯಂತ ಮದ್ಯಪಾನ ನಿಷೇಧ ಮಾಡಲಾಗಿದೆ. ಜೊತೆಗೆ ದತ್ತಪೀಠ ಮಾರ್ಗದಲ್ಲಿ ಬಾರಿ ವಾಹನಗಳ ಸಂಚಾರನ್ನು ಬಂದ್ ಮಾಡಲಾಗಿದೆ.

Ad Widget . Ad Widget . Ad Widget .

24ರ ಭಾನುವಾರದಂದು ನಗರದಲ್ಲಿ ಸಾವಿರಾರು ಮಹಿಳೆಯರು ಬೃಹತ್ ಸಂಕೀರ್ತನ ಯಾತ್ರೆ ನಡೆಸಿ ದತ್ತಪೀಠದಲ್ಲಿ ಹೋಮ ಹವನ ನಡೆಸುವ ಮೂಲಕ ಅನುಸೂಯ ಜಯಂತಿ ಆಚರಿಸಲಿದ್ದಾರೆ. 25ರ ಸೋಮವಾರದಂದು ಚಿಕ್ಕಮಗಳೂರು ನಗರದಲ್ಲಿ ದತ್ತಭಕ್ತರು ಹಾಗೂ ಸಾರ್ವಜನಿಕರಿಂದ ಬೃಹತ್ ಶೋಭಾಯಾತ್ರೆ ನಡೆಯಲಿದ್ದು 20 ಸಾವಿರಕ್ಕೂ ಅಧಿಕ ಶೋಭಾಯಾತ್ರೆಯಲ್ಲಿ ಭಾಗವಹಿಸಲಿದ್ದಾರೆ. 26ರಂದು ರಾಜ್ಯದ ಮೂಲೆ ಮೂಲೆಗಳಿಂದ ಬರುವ 25,000ಕ್ಕೂ ಅಧಿಕ ದತ್ತ ಭಕ್ತರು ದತ್ತಪೀಠಕ್ಕೆ ತೆರಳಿ ದತ್ತ ಪಾದಕ್ಕೆ ದರ್ಶನ ಪಡೆಯಲಿದ್ದಾರೆ.

Leave a Comment

Your email address will not be published. Required fields are marked *