ಉಡುಪಿ: ಪಿಯುಸಿ ವಿದ್ಯಾರ್ಥಿ ಹೃದಯಾಘಾತದಿಂದ ಸಾವು

ಸಮಗ್ರ ನ್ಯೂಸ್: ಚಿಕ್ಕಮಗಳೂರಿನಲ್ಲಿ 7ನೇ ತರಗತಿ ವಿದ್ಯಾರ್ಥಿನಿಯೊಬ್ಬಳು ಹೃದಯಾಘಾತದಿಂದ ಮೃತಪಟ್ಟ ಘಟನೆಯ ಬೆನ್ನಿಗೇ ಪ್ರಥಮ ಪಿಯುಸಿ ವಿದ್ಯಾರ್ಥಿಯೊಬ್ಬ ಹೃದಯಾಘಾತದಿಂದ ಮೃತಪಟ್ಟ ಘಟನೆ ಉಡುಪಿಯಲ್ಲಿ ನಡೆದಿದೆ.

Ad Widget ... ..

ಕಲ್ಯಾಣಪುರದ ಮಿಲಾಗ್ರಿಸ್ ಪಿಯು ಕಾಲೇಜಿನ ಪ್ರಥಮ ಪಿಯುಸಿ ಓದುತ್ತಿದ್ದ ಅಫ್ಕಾರ್ (17) ಮೃತ ವಿದ್ಯಾರ್ಥಿ. ಅಫ್ಕಾರ್‌ ಹುಟ್ಟಿನಿಂದ ಹೃದಯ ಸಂಬಂಧಿ ಕಾಯಿಲೆಯಿಂದ ಬಳಲುತ್ತಿದ್ದ ಎಂದು ಮನೆಯವರು ತಿಳಿಸಿದ್ದಾರೆ. ಡಿಸೆಂಬರ್ 6ರಂದು ನಾರಾಯಣ ಹೃದಯಾಲಯದಲ್ಲಿ ಚಿಕಿತ್ಸೆ ಪಡೆದಿದ್ದ ಬಾಲಕ ಕಳೆದ 18ರಂದು ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಿದ್ದ. ಮನೆಗೆ ತಲುಪಿದ್ದ ಬಾಲಕನಿಗೆ ಮತ್ತೆ ಆರೋಗ್ಯದಲ್ಲಿ ಏರುಪೇರಾಗಿತ್ತು. ಆಸ್ಪತ್ರೆಗೆ ಸಾಗಿಸುವ ವೇಳೆ ಮೃತಪಟ್ಟಿದ್ದಾನೆ. ಹೃದಯಾಘಾತವಾಗಿ ಮೃತಪಟ್ಟಿದ್ದಾನೆಂದು ವೈದ್ಯರು ದೃಢೀಕರಿಸಿದ್ದಾರೆ.

Ad Widget

Leave a Comment

Your email address will not be published. Required fields are marked *