ಮಂಗಳೂರು: ಏಕಾಏಕಿ ವಿಮಾನ ರದ್ದು| ತಡರಾತ್ರಿ ಪರ್ಯಾಯ ವ್ಯವಸ್ಥೆ

ಸಮಗ್ರ ನ್ಯೂಸ್: ಮಂಗಳೂರಿನಿಂದ ಬೆಂಗಳೂರಿಗೆ ಶನಿವಾರ(ಡಿ.23) ರಾತ್ರಿ 8.15ಕ್ಕೆ ತೆರಳಬೇಕಾಗಿದ್ದ ಏರ್ ಇಂಡಿಯಾ ವಿಮಾನ ರದ್ದಾದ ಕಾರಣ ಪ್ರಯಾಣಿಕರು ಮಂಗಳೂರು ವಿಮಾನ ನಿಲ್ದಾಣದಲ್ಲಿ ತಡರಾತ್ರಿ ವರೆಗೆ ಕಾಯಬೇಕಾದ ಪರಿಸ್ಥಿತಿ ಎದುರಿಸಬೇಕಾಯಿತು.

Ad Widget ... ..

ಶನಿವಾರ ರಾತ್ರಿ 8.15ರ ವಿಮಾನ ಎಷ್ಟು ಕಾದರೂ ಬಾರದೆ ಇದ್ದುದರಿಂದ ಏರ್ ಇಂಡಿಯಾ ಕಚೇರಿಯನ್ನು ಪ್ರಯಾಣಿಕರು ತರಾಟೆಗೆ ತೆಗೆದುಕೊಂಡಿದ್ದಾರೆ.

Ad Widget

ಪರ್ಯಾಯ ವ್ಯವಸ್ಥೆ ಮಾಡಿಕೊಡುವಂತೆ ಪ್ರಯಾಣಿಕರು ಒತ್ತಾಯಿಸಿದ್ದಾರೆ. ತಡರಾತ್ರಿ 2.30ಕ್ಕೆ ಪರ್ಯಾಯ ವಿಮಾನದ ವ್ಯವಸ್ಥೆ ಮಾಡಲಾಗಿದೆ ಎಂದು ಮೂಲಗಳು ತಿಳಿಸಿವೆ.

Leave a Comment

Your email address will not be published. Required fields are marked *