ಸಮಗ್ರ ನ್ಯೂಸ್: ರಾಜ್ಯ ಬಿಜೆಪಿಯಲ್ಲಿ ಮಹತ್ವದ ಬದಲಾವಣೆ ಎನ್ನುವಂತೆ ಇದೀಗ ವಿಧಾನ ಪರಿಷತ್ ವಿಪಕ್ಷ ನಾಯಕರನ್ನಾಗಿ ಕೋಟಾ ಶ್ರೀನಿವಾಸ ಪೂಜಾರಿ ನೇಮಿಸಲಾಗಿದೆ. ಅಲ್ಲದೇ ವಿಧಾನಸಭೆ ವಿರೋಧ ಪಕ್ಷದ ಉಪ ನಾಯಕರನ್ನಾಗಿ ಅರವಿಂದ್ ಬೆಲ್ಲದ್ ನೇಮಕ ಮಾಡಲಾಗಿದೆ.
ಈ ಕುರಿತಂತೆ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ ವಿಜಯೇಂದ್ರ ಆದೇಶ ಹೊರಡಿಸಿದ್ದು, ಬಿಜೆಪಿ ರಾಷ್ಟ್ರೀಯ ಅಧ್ಯಕ್ಷರಾದಂತ ಜೆಪಿ ನಡ್ಡಾ ಅವರ ಸೂಚನೆಯ ಮೇರೆಗೆ ವಿಧಾನಸಭೆ ಮತ್ತು ವಿಧಾನ ಪರಿಷತ್ತಿನ ವಿವಿಧ ಜವಾಬ್ದಾರಿಗಳಿಗೆ ನಿಯುಕ್ತಿಗೊಳಿಸಲಾಗಿದೆ ಎಂದಿದ್ದಾರೆ.
ವಿಧಾನ ಪರಿಷತ್ ವಿರೋಧ ಪಕ್ಷದ ನಾಯಕರಾಗಿ ಕೋಟಾ ಶ್ರೀನಿವಾಸ ಪೂಜಾರಿ, ವಿರೋಧ ಪಕ್ಷದ ಉಪನಾಯಕರಾಗಿ ಸುನೀಲ್ ವಲ್ಯಾಪುರೆ ಹಾಗೂ ಮುಖ್ಯ ಸಚೇತಕರಾಗಿ ಎನ್.ರವಿಕುಮಾರ್ ನೇಮಕ ಮಾಡಲಾಗಿದೆ.
ಇನ್ನೂ ವಿಧಾನಸಭೆಯ ವಿರೋಧ ಪಕ್ಷದ ಉಪ ನಾಯಕರಾಗಿ ಅರವಿಂದ್ ಬೆಲ್ಲದ್, ಮುಖ್ಯ ಸಚೇತಕರಾಗಿ ದೊಡ್ಡನಗೌಡ ಜಿ ಪಾಟೀಲ್ ಅವರನ್ನು ನೇಮಕ ಮಾಡಿ ಆದೇಶಿಸಲಾಗಿದೆ.