ಸಾರಿಗೆ ಸಚಿವರ ಮನೆ ಬಳಿಯೇ ರೌಡಿಶೀಟರ್ ಬರ್ಬರ ಹತ್ಯೆ

ಸಮಗ್ರ ನ್ಯೂಸ್: ಬೆಂಗಳೂರಿನಲ್ಲಿ ರೌಡಿಶೀಟರ್​ ಓರ್ವನನ್ನು ಬರ್ಬರವಾಗಿ ಹತ್ಯೆ ಮಾಡಲಾಗಿದೆ. ಅದು ಸಾರಿಗೆ ಸಚಿವ ರಾಮಲಿಂಗಾ ರೆಡ್ಡಿ ಅವರ ನಿವಾಸದ ಸಮೀಪವೇ ದುಷ್ಕರ್ಮಿಗಳ ಗುಂಪು ರೌಡಿಶೀಟರ್ ನನ್ನು ಮಾರಕಾಸ್ತ್ರಗಳಿಂದ ಕೊಚ್ಚಿ ಕೊಲೆ ಮಾಡಿ ಎಸ್ಕೇಪ್ ಆಗಿದ್ದಾರೆ. ಜೈ ಪ್ರಕಾಶ್ ಅಲಿಯಾಸ್ ಅಪ್ಪಿ ಕೊಲೆಯಾದ ರೌಡಿಶೀಟರ್ ಆಗಿದ್ದು, ಐದಾರು ದುಷ್ಕರ್ಮಿಗಳ ತಂಡ ಅಟ್ಟಾಡಿಸಿ ರೌಡಿಶೀಟರ್​​ನನ್ನು ಕೊಲೆ ಮಾಡಿ ಎಸ್ಕೇಪ್ ಆಗಿದ್ದಾರೆ ಎನ್ನಲಾಗಿದೆ.

Ad Widget ... ..

ಈ ಘಟನೆ ಆಡುಗೋಡಿ ಠಾಣಾ ವ್ಯಾಪ್ತಿಯ ಲಕ್ಕಸಂಧ್ರದಲ್ಲಿ ನಡೆದಿದ್ದು, ಆಡುಗೋಡಿ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಇಂದು ಸಂಜೆ 6 ಗಂಟೆ ಸಮಯದಲ್ಲಿ ಮೃತ ರೌಡಿಶೀಟರ್ ಹೋಟೆಲ್ ಒಳಗೆ ಟೀ ಕುಡಿಯಲು ಬಂದಿದ್ದು, ಈ ವೇಳೆ ಏಕಾಏಕಿ ದಾಳಿ ನಡೆಸಿದ್ದ ದುಷ್ಕರ್ಮಿಗಳ ತಂಡ ಮಾರಾಕಸ್ತ್ರಗಳಿಂದ ಅಟ್ಯಾಕ್ ಮಾಡಿ ಪರಾರಿಯಾಗಿದ್ದಾರೆ.

Ad Widget

2006ರಲ್ಲಿ ಕೊಲೆ ಪ್ರಕರಣವೊಂದರಲ್ಲಿ ಜೈಪ್ರಕಾಶ್ ಆರೋಪಿಯಾಗಿದ್ದ. ಹಳೆ ದ್ವೇಷ ಹಿನ್ನೆಲೆ ಕೊಲೆ ನಡೆದಿರುವ ಶಂಕೆಯು ವ್ಯಕ್ತವಾಗಿದೆ. ಐದು ತಂಡ ರಚಿಸಿ ಆರೋಪಿಗಳ ಪತ್ತೆಗೆ ಹುಡುಕಾಟ ನಡೆಸಲಾಗುವುದು ಎಂದು ಡಿಸಿಪಿ ಸಿ.ಕೆ ಬಾಬಾ ತಿಳಿಸಿದ್ದಾರೆ.

Leave a Comment

Your email address will not be published. Required fields are marked *