ಕೋಳಿ ಅಂಕದ ಮೇಲೆ ಪೊಲೀಸರ ದಾಳಿ

ಸಮಗ್ರ ನ್ಯೂಸ್: ಜೂಜಾಟ ಅಡ್ಡೆಯ ಮೇಲೆ ಪೊಲೀಸರು ದಾಳಿ ನಡೆಸಿ 12 ಮಂದಿ ಜೂಜುಕೋರರನ್ನು ಬಂಧಿಸಿರುವ ಘಟನೆ ಕೋಲಾರ ಜಿಲ್ಲೆಯ ಶ್ರೀನಿವಾಸಪುರ ತಾಲೂಕಿನ ಕಲ್ಲೂರು ಗ್ರಾಮದ ಬಳಿ ನಡೆದಿದೆ.

Ad Widget ... ..

ಕೋಲಾರ ಮೂಲದ ಜೂಜುಕೋರರಿಂದ ಜೂಜು ಅಡ್ಡೆ ತೆರೆದಿರುವ ಬಗ್ಗೆ ಖಚಿತ ಮಾಹಿತಿ ಪಡೆದ ಪೊಲೀಸರು ಇಂದು, ಕೋಳಿ ಅಂಕದ ಮೇಲೆ ದಾಳಿ ನಡೆಸಿದ್ದರು. ಈ ವೇಳೆ 12 ಮಂದಿ ಜೂಜುಕೋರರಿಂದ 17 ಸಾವಿರ ನಗದು, 8 ಬೈಕ್, 8 ಮೊಬೈಲ್ 3 ಪಂದ್ಯ ಕೋಳಿಗಳು ವಶಕ್ಕೆ ಪಡೆದುಕೊಳ್ಳಲಾಗಿದೆ. ಕೋಲಾರ ಗಲ್ ಪೇಟೆ ಪೊಲೀಸರು ವಿಶೇಷ ತಂಡದಿಂದ ಕಾರ್ಯಾಚರಣೆ ನಡೆಸಿದ್ದು, ಘಟನೆ ಸಂಬಂಧ ಶ್ರೀನಿವಾಸಪುರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲು ಮಾಡಿಕೊಳ್ಳಲಾಗಿದೆ.

Ad Widget

Leave a Comment

Your email address will not be published. Required fields are marked *