ಸಮಗ್ರ ಉದ್ಯೋಗ: Ramanagara District Court ಖಾಲಿ ಇರುವ ಹುದ್ದೆಗಳನ್ನು ಭರ್ತಿ ಮಾಡಲು ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಿದೆ. ಒಟ್ಟು 6 ಸ್ಟೆನೋಗ್ರಾಫರ್, ಟೈಪಿಸ್ಟ್ ಹುದ್ದೆಗಳು ಖಾಲಿ ಇದ್ದು, ಆಸಕ್ತರು ಅರ್ಜಿ ಸಲ್ಲಿಸಬಹುದು. ಜನವರಿ 22, 2024 ಅರ್ಜಿ ಸಲ್ಲಿಸಲು ಕೊನೆಯ ದಿನವಾಗಿದೆ. ಆಸಕ್ತರು ಆನ್ಲೈನ್ ಮೂಲಕ ಅಪ್ಲೈ ಮಾಡಬೇಕು.
ಹುದ್ದೆಯ ಮಾಹಿತಿ:
ಸ್ಟೆನೋಗ್ರಾಫರ್- 3
ಟೈಪಿಸ್ಟ್- 2
ಟೈಪಿಸ್ಟ್-ಕಾಪಿಯಿಸ್ಟ್-1
ಶೈಕ್ಷಣಿಕ ಅರ್ಹತೆ:
ರಾಮನಗರ ಜಿಲ್ಲಾ ಕೋರ್ಟ್ ನೇಮಕಾತಿ ಅಧಿಸೂಚನೆ ಪ್ರಕಾರ, ಅಭ್ಯರ್ಥಿಗಳು ಯಾವುದೇ ಮಾನ್ಯತೆ ಪಡೆದ ವಿಶ್ವವಿದ್ಯಾಲಯ/ಮಂಡಳಿಯಿಂದ ಕಡ್ಡಾಯವಾಗಿ ಪಿಯುಸಿ, ಡಿಪ್ಲೊಮಾ ಪೂರ್ಣಗೊಳಿಸಿರಬೇಕು.
ವಯೋಮಿತಿ:
ರಾಮನಗರ ಜಿಲ್ಲಾ ಕೋರ್ಟ್ ನೇಮಕಾತಿ ಅಧಿಸೂಚನೆ ಪ್ರಕಾರ, ಅಭ್ಯರ್ಥಿಗಳ ವಯಸ್ಸು ಜನವರಿ 22, 2024ಕ್ಕೆ ಕನಿಷ್ಠ 18 ವರ್ಷ ಮತ್ತು ಗರಿಷ್ಠ 35 ವರ್ಷ ಮೀರಿರಬಾರದು.
ವಯೋಮಿತಿ ಸಡಿಲಿಕೆ:
SC/ST/ಪ್ರವರ್ಗ-I ಅಭ್ಯರ್ಥಿಗಳು: 05 ವರ್ಷಗಳು
ಪ್ರವರ್ಗ-2A/2B/3A & 3B ಅಭ್ಯರ್ಥಿಗಳು: 03 ವರ್ಷಗಳು
ವೇತನ:
ಸ್ಟೆನೋಗ್ರಾಫರ್- ಮಾಸಿಕ ₹ 27,650-52,650
ಟೈಪಿಸ್ಟ್- ಮಾಸಿಕ ₹ 21,400-42,000
ಟೈಪಿಸ್ಟ್-ಕಾಪಿಯಿಸ್ಟ್- ಮಾಸಿಕ ₹ 21,400- 42,000
ಅರ್ಜಿ ಶುಲ್ಕ:
SC/ST/ಪ್ರವರ್ಗ-I/PH ಅಭ್ಯರ್ಥಿಗಳು: ಇಲ್ಲ
ಪ್ರವರ್ಗ-2A/2B/3A & 3B ಅಭ್ಯರ್ಥಿಗಳು: ರೂ.100/-
ಸಾಮಾನ್ಯ ಅಭ್ಯರ್ಥಿಗಳು: ರೂ.200/-
ಪಾವತಿ ವಿಧಾನ: ಆನ್ಲೈನ್
ಉದ್ಯೋಗದ ಸ್ಥಳ:
ರಾಮನಗರ
ಆಯ್ಕೆ ಪ್ರಕ್ರಿಯೆ:
ಮೆರಿಟ್ ಲಿಸ್ಟ್
ಟೈಪಿಂಗ್ ಟೆಸ್ಟ್
ಸಂದರ್ಶನ
ಅರ್ಜಿ ಹಾಕೋದು ಹೇಗೆ?
ಅಭ್ಯರ್ಥಿಗಳು ಆನ್ಲೈನ್ ಮೂಲಕ ಅಪ್ಲೈ ಮಾಡಬೇಕು ಎಂದು ನೋಟಿಫಿಕೇಶನ್ನಲ್ಲಿ ತಿಳಿಸಲಾಗಿದೆ. ನೇರವಾಗಿ ಅಪ್ಲೈ ಮಾಡಲು ಲಿಂಕ್ಗಳನ್ನು ಈ ಕೆಳಗೆ ನೀಡಲಾಗಿದೆ.
https://recruitmenthck.kar.nic.in/district/rmn/typ/home.php Online ಮೂಲಕ ಅರ್ಜಿ ಹಾಕಿ.
ರಾಜ್ಯ ಸರ್ಕಾರದ ಉದ್ಯೋಗ ಹುಡುಕುತ್ತಿರುವ ಸ್ಥಳೀಯ ಅಭ್ಯರ್ಥಿಗಳು ಈ ಅವಕಾಶವನ್ನು ಸದುಪಯೋಗಪಡಿಸಿಕೊಳ್ಳಿ.