ನಾಳೆ ಬಿಜೆಪಿ ಪದಾಧಿಕಾರಿಗಳ ಸಭೆ/ ಜಿಲ್ಲಾ ಪದಾಧಿಕಾರಿಗಳ ಆಯ್ಕೆ ಪ್ರಕ್ರಿಯೆಗೆ ಚಾಲನೆ

ಸಮಗ್ರ ನ್ಯೂಸ್: ಬಿಜೆಪಿಯ ನೂತನ ಪದಾಧಿಕಾರಿಗಳ ಸಭೆ ನಾಳೆ ಬೆಳಿಗ್ಗೆ 10 ಗಂಟೆಗೆ ನಡೆಯಲಿದ್ದು, ರಾಜ್ಯಾಧ್ಯಕ್ಷರಾದ ವಿಜಯೇಂದ್ರ ಅವರು ಉದ್ಘಾಟನೆ ನಡೆಸಲಿದ್ದಾರೆ. ನಂತರ ಜಿಲ್ಲಾ ಪದಾಧಿಕಾರಿಗಳ ಆಯ್ಕೆ ಸಂಬಂಧ ಪ್ರಮುಖರ ಪ್ರಕ್ರಿಯೆಗೆ ಚಾಲನೆ ಕೊಡುವ ಸಭೆ ನಡೆಯಲಿದೆ ಎಂದು ಬಿಜೆಪಿ ರಾಜ್ಯ ಪ್ರಧಾನ ಕಾರ್ಯದರ್ಶಿ ಪಿ.ರಾಜೀವ್ ಅವರು ತಿಳಿಸಿದರು.

. Ad Widget . Ad Widget . Ad Widget

ಸಭೆಯ ಬಳಿಕ ಪ್ರಮುಖರು ಎಲ್ಲ ಜಿಲ್ಲೆಗಳಿಗೆ ತೆರಳಿ ಜಿಲ್ಲೆಯ ಎಲ್ಲ ಪ್ರಮುಖರಿಂದ ಅಭಿಪ್ರಾಯ ಸಂಗ್ರಹಿಸಿ ಜಿಲ್ಲಾಧ್ಯಕ್ಷರು, ಜಿಲ್ಲಾ ಪದಾಧಿಕಾರಿಗಳನ್ನು ಆಯ್ಕೆ ಮಾಡಲಿದ್ದಾರೆ. ಎಲ್ಲರ ಅಭಿಪ್ರಾಯದೊಂದಿಗೆ ಪಕ್ಷವನ್ನು ಮುನ್ನಡೆಸುವ ತೀರ್ಮಾನ ರಾಜ್ಯಾಧ್ಯಕ್ಷರದು ಎಂದು ಅವರು ವಿವರಿಸಿದರು.

. Ad Widget .

Leave a Comment

Your email address will not be published. Required fields are marked *