ಸಮಗ್ರ ಉದ್ಯೋಗ: National Water Development Agency ಖಾಲಿ ಇರುವ ಹುದ್ದೆಗಳನ್ನು ಭರ್ತಿ ಮಾಡಲು ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಿದೆ. ಒಟ್ಟು 9 ಸೂಪರಿಂಟೆಂಡಿಂಗ್ ಎಂಜಿನಿಯರ್, ಡೆಪ್ಯುಟಿ ಡೈರೆಕ್ಟರ್ ಹುದ್ದೆಗಳು ಖಾಲಿ ಇದ್ದು, ಆಸಕ್ತರು ಅರ್ಜಿ ಸಲ್ಲಿಸಬಹುದು. ಡಿಸೆಂಬರ್ 29, 2023 ಅಂದರೆ ನಾಳೆ ಅರ್ಜಿ ಸಲ್ಲಿಸಲು ಕೊನೆಯ ದಿನವಾಗಿದೆ. ಅಭ್ಯರ್ಥಿಗಳು ಆಫ್ಲೈನ್ ಮೂಲಕ ಅರ್ಜಿ ಸಲ್ಲಿಸಬೇಕು. ಕೇಂದ್ರ ಸರ್ಕಾರದ ಉದ್ಯೋಗ ಹುಡುಕುತ್ತಿರುವವರು ಈ ಅವಕಾಶವನ್ನು ಸದುಪಯೋಗಪಡಿಸಿಕೊಳ್ಳಬಹುದು.
ಹುದ್ದೆಯ ಮಾಹಿತಿ:
ಸೂಪರಿಂಟೆಂಡಿಂಗ್ ಎಂಜಿನಿಯರ್ – 4
ಡೆಪ್ಯುಟಿ ಡೈರೆಕ್ಟರ್/ ಎಕ್ಸಿಕ್ಯೂಟಿವ್ ಎಂಜಿನಿಯರ್- 5
ವಿದ್ಯಾರ್ಹತೆ:
ಸೂಪರಿಂಟೆಂಡಿಂಗ್ ಎಂಜಿನಿಯರ್ – ಸಿವಿಲ್ ಎಂಜಿನಿಯರಿಂಗ್ನಲ್ಲಿ ಪದವಿ
ಡೆಪ್ಯುಟಿ ಡೈರೆಕ್ಟರ್/ ಎಕ್ಸಿಕ್ಯೂಟಿವ್ ಎಂಜಿನಿಯರ್- ಡಿಪ್ಲೊಮಾ, ಸಿವಿಲ್ ಎಂಜಿನಿಯರಿಂಗ್ನಲ್ಲಿ ಪದವಿ
ವಯೋಮಿತಿ:
ರಾಷ್ಟ್ರೀಯ ಜಲ ಅಭಿವೃದ್ಧಿ ಸಂಸ್ಥೆ ನೇಮಕಾತಿ ಅಧಿಸೂಚನೆ ಪ್ರಕಾರ, ಅಭ್ಯರ್ಥಿಗಳ ವಯಸ್ಸು ಡಿಸೆಂಬರ್ 29, 2023ಕ್ಕೆ ಗರಿಷ್ಠ 56 ವರ್ಷ ಮೀರಿರಬಾರದು. ಮೀಸಲಾತಿ ಅನುಸಾರ ಅಭ್ಯರ್ಥಿಗಳಿಗೆ ವಯೋಮಿತಿ ಸಡಿಲಿಕೆ ನೀಡಲಾಗುತ್ತದೆ.
ವೇತನ:
ಸೂಪರಿಂಟೆಂಡಿಂಗ್ ಎಂಜಿನಿಯರ್ – ಮಾಸಿಕ ₹ 78,800-2,09,200
ಡೆಪ್ಯುಟಿ ಡೈರೆಕ್ಟರ್/ ಎಕ್ಸಿಕ್ಯೂಟಿವ್ ಎಂಜಿನಿಯರ್- ಮಾಸಿಕ ₹ 67,700-2,08,700
ಉದ್ಯೋಗದ ಸ್ಥಳ:
ಭಾರತದಲ್ಲಿ ಎಲ್ಲಿ ಬೇಕಾದರೂ
ಆಯ್ಕೆ ಪ್ರಕ್ರಿಯೆ:
ಲಿಖಿತ ಪರೀಕ್ಷೆ
ಸಂದರ್ಶನ
ಅರ್ಜಿ ಹಾಕೋದು ಹೇಗೆ?
ಅಭ್ಯರ್ಥಿಗಳು ಭರ್ತಿ ಮಾಡಿದ ಅರ್ಜಿ ನಮೂನೆಯನ್ನು ಅಗತ್ಯ ದಾಖಲಾತಿಗಳೊಂದಿಗೆ ಈ ಕೆಳಕಂಡ ವಿಳಾಸಕ್ಕೆ ನಾಳೆಯೊಳಗೆ ಕಳುಹಿಸಬೇಕು.
ಉಪ ನಿರ್ದೇಶಕರು (ಆಡಳಿತ)
ರಾಷ್ಟ್ರೀಯ ಜಲ ಅಭಿವೃದ್ಧಿ ಸಂಸ್ಥೆ ,18-20
ಸಮುದಾಯ ಕೇಂದ್ರ
ಸಾಕೇತ್
ನವದೆಹಲಿ – 110017