ಸಮಗ್ರ ನ್ಯೂಸ್: ಜನವರಿ 22ರಂದು ರಾಮ ಮಂದಿರ ಉದ್ಘಾಟನೆಗೆ ದಿನಗಣನೆ ಅಷ್ಟೆ ಬಾಕಿ ಇದೆ. ಈ ಸಮಾರಂಭಕ್ಕೆ ಮುನ್ನ ರಾಮ ಮಂದಿರದ ನಿರ್ಮಾಣ ಕಾರ್ಯ ಭರದಿಂದ ಸಾಗುತ್ತಿದ್ದು, 600 ಕೆಜಿ ತೂಕದ ಗಂಟೆಯು ಬೃಹತ್ ಸಂಕೀರ್ಣದಲ್ಲಿ ಸ್ಥಾಪನೆಯಾಗಲಿದೆ.
ಲೋಹದಿಂದ ಮಾಡಲಾದ ಗಂಟೆಯ ಮೇಲೆ ‘ಜೈ ಶ್ರೀ ರಾಮ್’ ಎಂಬ ದೊಡ್ಡದಾಗಿ ಕೆತ್ತಲಾಗಿದೆ. ಮರ್ಯಾದಾ ಪುರುಷೋತ್ತಮ ಶ್ರೀ ರಾಮ್ ಅಂತರಾಷ್ಟ್ರೀಯ ವಿಮಾನ ನಿಲ್ದಾಣ ಎಂದು ಕರೆಯಲ್ಪಡುವ ವಿಮಾನ ನಿಲ್ದಾಣ ಮತ್ತು ಅಯೋಧ್ಯಾ ಧಾಮ್ ಜಂಕ್ಷನ್ ಎಂದು ಮರುನಾಮಕರಣಗೊಂಡಿರುವ ನವೀಕರಿಸಿದ ರೈಲು ನಿಲ್ದಾಣವನ್ನು ಉದ್ಘಾಟಿಸಲು ಪ್ರಧಾನಿ ನರೇಂದ್ರ ಮೋದಿ ಅವರು ಶನಿವಾರ ಅಯೋಧ್ಯೆಗೆ ಬರಲಿದ್ದಾರೆ.
ರಾಮ ಮಂದಿರದ ಮೊದಲ ಹಂತದ ನಿರ್ಮಾಣ ಕೆಲವೇ ದಿನಗಳಲ್ಲಿ ಪೂರ್ಣಗೊಳ್ಳಲಿದ್ದು, ಆ ಬಳಿಕ ಅಲಂಕಾರ ಕಾರ್ಯ ಆರಂಭವಾಗಲಿದೆ. ಜನವರಿ 22 ರಂದು ನಡೆಯುವ ಪ್ರಾಣ ಪ್ರತಿಷ್ಠಾ ಸಮಾರಂಭದಲ್ಲಿ ಪಾಲ್ಗೊಳ್ಳಲು ಸುಮಾರು 8,000 ಗಣ್ಯರನ್ನು ಆಹ್ವಾನಿಸಲಾಗಿದ್ದು, ಪ್ರಧಾನಿ ಮೋದಿ ಅವರು ಸಭೆಯನ್ನು ಉದ್ದೇಶಿಸಿ ಮಾತನಾಡುವ ನಿರೀಕ್ಷೆಯಿದೆ. ರಾಮಲಲ್ಲಾ ಪ್ರಾಣಪ್ರತಿಷ್ಠೆ ಸಂದರ್ಭದಲ್ಲಿ ಶ್ರೀರಾಮನ ವಿಗ್ರಹವನ್ನು ಗರ್ಭಗುಡಿಯಲ್ಲಿ ಇರಿಸಲಾಗುತ್ತದೆ.